ಧಾರವಾಡ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮಂಜುನಾಥ್ ಬಸಪ್ಪ ಕೌದಿ(25) ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಕಳ್ಳತನ ಮಾಡಿರುವ ಆರೋಪದ ಮೇಲೆ ವಿಚಾರಣೆಗೆ ಆಗಮಿಸಿದಾಗ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇನ್ಸ್ ಪೆಕ್ಟರ್ ಮಾರುತಿ ಗುಳ್ಳಾರಿ ಸೇರಿದಂತೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
Advertisement
ಆರೋಪಿ ಮಂಜುನಥ್ ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇಂದು ಠಾಣೆಗೆ ಬಂದು ಏಕಾಏಕಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
Advertisement
ಮಂಜುನಾಥ್ ಕೆಲದಿನಗಳ ಹಿಂದೆ ದರೋಡೆ ಕೇಸ್‍ನಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.