ಗದಗ: ಶಿರಹಟ್ಟಿ ತಾಲೂಕಿನ ಬಟ್ಟೂರು ಗ್ರಾಮದ ಶಿವಾನಂದ ಗಾಣಗೇರ ಪೊಲೀಸ್ ಠಾಣೆಯಲ್ಲಿಯೇ ವಿಚಾರಣಾಧೀನ ಕೈದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ, ಠಾಣೆಗೆ ಬೆಂಕಿಯಿಟ್ಟು ಸಂಬಂಧಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏನಿದು ಪ್ರಕರಣ?: ಅಕ್ರಮ ಮರಳುದಂಧೆ ಆರೋಪದ ಮೇಲೆ ಶಿವಾನಂದ ಗಾಣಿಗೇರ ಪೊಲೀಸರ ವಶದಲ್ಲಿದ್ದರು. ತೀವ್ರ ವಿಚಾರಣೆಯಲ್ಲಿದ್ದ ಶಿವಾನಂದ ಠಾಣೆಯಲ್ಲೇ ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಶಿವಾನಂದ ಸಂಬಧಿಕರು, ಪೊಲಿಸರು ಲಾಕಪ್ ಡೆತ್ ಮಾಡಿರುವುದಾಗಿ ಆರೋಪ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಠಾಣೆಯೊಳಗೆ ಎಸ್‍ಐ ಶಿವಾನಂದ್ ಹಾಗೂ ಸಿಬ್ಬಂದಿಯಿದ್ದು, ತಮ್ಮ ಪ್ರಾಣ ರಕ್ಷಿಸಿಕೊಳ್ಳುವ ಸಲುವಾಗಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಮೃತನ ಸಂಬಂಧಿಕರು ಏಕಾಏಕಿ ಠಾನೆಯ ಒಳನುಗಿ, ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಇನ್ನು ಪೊಲಿಸ್ ಜೀಪ್‍ಗೂ ಬೆಂಕಿ ಹಚ್ಚಿದ್ದು, ಸಂಪೂರ್ಣವಾಗಿ ಭಸ್ಮವಾಗಿದೆ.
- Advertisement
- Advertisement
ಸದ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸುತ್ತಿದ್ದು, ಕಿಡಿಗೇಡಿಗಳು ಕೂಡ ಅಲ್ಲಿಂದ ಪರಾರಿಯಾಗಿದ್ದಾರೆ. ಹಾಗೆಯೇ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.