Saturday, 15th December 2018

Recent News

ಶಿಕ್ಷೆಗೆ ಮುನ್ನವೇ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ!

ರಾಯಚೂರು: ಕೊಲೆ ಪ್ರಕರಣ ಆರೋಪಿಯೊಬ್ಬ ಶಿಕ್ಷೆ ಪ್ರಕಟಿಸುವ ಮುನ್ನವೇ ನ್ಯಾಯಾಲಯದ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರಿನ ಜ್ಯೋತಿ ಕಾಲೋನಿ ನಿವಾಸಿಯಾಗಿದ್ದ ಶಂಕರ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಪತ್ನಿ ಕೊಲೆ ಪ್ರಕರಣದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಎರಡು ಕಾಲು ಮುರಿದಿದ್ದು, ಶಂಕರನನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

2016 ಜನವರಿ 30 ರಂದು ಪತ್ನಿ ಶಿವಪುತ್ರಮ್ಮಳನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ ಪಶ್ಚಿಮ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ. ಜಿಲ್ಲಾ ಸೇಷನ್ ಜಡ್ಜ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಆರೋಪಿ ಶಂಕರ್‌ನ ಇಬ್ಬರು ಮಕ್ಕಳು ಕೊಲೆ ಮಾಡಿರುವ ಬಗ್ಗೆ ಸಾಕ್ಷಿ ಹೇಳಿದ್ದರು. ಅಪರಾಧ ಸಾಬೀತಾದ ಹಿನ್ನೆಲೆ ಇಂದು ಶಿಕ್ಷೆಯ ಪ್ರಮಾಣದ ತೀರ್ಪು ಪ್ರಕಟಿಸಬೇಕಿತ್ತು. ಈ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply

Your email address will not be published. Required fields are marked *