ಲಕ್ನೋ: ಕಾಂಗ್ರೆಸ್‌ನ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಅವರು ರಾಹುಲ್ ಗಾಂದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕಳೆದ 13-14 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಎಸೆದಿರುವ ರಾಹುಲ್ ಗಾಂಧಿ ಅವರಿಗೆ ಸಾಕಷ್ಟು ಅನುಭವವಿದೆ ಎಂದು ಕಿಡಿಕಾರಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ‘ಅಗ್ನಿವೀರ್ ಯೋಜನೆ’ಯನ್ನು ಕಸದ ಬುಟ್ಟಿಗೆ ಎಸೆಯುವುದಾಗಿ ರಾಹುಲ್ ಗಾಂಧಿ ನಿರಂತರವಾಗಿ ಹೇಳುತ್ತಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ರಾಹುಲ್ ಗಾಂಧಿ (Rahul Gandhi) ಅವರಿಗೆ ಕಸದ ತೊಟ್ಟಿಗಳಲ್ಲಿ ಸಾಕಷ್ಟು ಅನುಭವವಿದೆ. ಮನಮೋಹನ್ ಜಿಯವರ ಸುಗ್ರೀವಾಜ್ಞೆಯನ್ನು ಹರಿದು ಕಸದ ಬುಟ್ಟಿಗೆ ಎಸೆದಿದ್ದರು. ಅವರು 13-14 ವರ್ಷಗಳಲ್ಲಿ ಇಡೀ ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಎಸೆದರು ಎಂದರು.
Advertisement
Advertisement
ಸೋನಿಯಾ, ರಾಜೀವ್, ಇಂದಿರಾ ಅವರ ಜೊತೆಗಿದ್ದ ಕಾಂಗ್ರೆಸ್‌ನ ದೊಡ್ಡ ನಾಯಕರನ್ನೂ ಕಸದ ಬುಟ್ಟಿಗೆ ಎಸೆಯಲಾಯಿತು. ರಾಹುಲ್ ಗಾಂಧಿ ಅವರೇ ಧೈರ್ಯ ಇದ್ದರೆ ಈ ದೇಶವನ್ನು ಕಸದ ಬುಟ್ಟಿಗೆ ಎಸೆಯಿರಿ. ಅವರೇ ಕಸದ ಒಡೆಯ. ಅವರು ಯಾರನ್ನೂ ಕಸದ ಬುಟ್ಟಿಗೆ ಎಸೆಯಬಹುದು. ಸನಾತನವನ್ನು ಕಸದ ಬುಟ್ಟಿಗೆ ಎಸೆಯಲು ಬಯಸುತ್ತಾರೆ ಎಂದು ರಾಗಾ ವಿರುದ್ಧ ಆಚಾರ್ಯರು ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಗಾ ಒಬ್ಬ ಮಹಾನ್ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ
Advertisement
Advertisement
ಈ ಹಿಂದೆ ವಾಗ್ದಾಳಿ ನಡೆಸಿದ್ದ ಆಚಾರ್ಯರು, ಕಾಂಗ್ರೆಸ್ ತೊಲಗಬೇಕು ಎಂದು ಮಹಾತ್ಮ ಗಾಂಧೀಜಿ ಕನಸು ಕಂಡಿದ್ದರು, ಬಿಜೆಪಿಯಿಂದ ಆ ಕೆಲಸ ಮಾಡಲು ಸಾಧ್ಯವಿಲ್ಲ, ಆದರೆ ರಾಹುಲ್ ಗಾಂಧಿ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಮಹಾನ್ ವ್ಯಕ್ತಿ, ಅವರು ಏನು ಬೇಕಾದರೂ ಹೇಳಬಲ್ಲರು. ಕಾಂಗ್ರೆಸ್ ಅನ್ನು ನಾಶ ಮಾಡುವ ಕೆಲಸವನ್ನು ಅವರು ಚೆನ್ನಾಗಿ ಮಾಡುತ್ತಿದ್ದಾರೆ. ನನಗಷ್ಟೇ ಅಲ್ಲ, ದೇಶಾದ್ಯಂತ ಇರುವ ಕೋಟ್ಯಂತರ ಕಾಂಗ್ರೆಸ್ ಕಾರ್ಯಕರ್ತರಿಗೆ ಇದರ ಅರಿವಿದೆ ಎಂದಿದ್ದರು.
#WATCH संभल: राहुल गांधी के बयान पर पूर्व कांग्रेस नेता आचार्य प्रमोद कृष्णम ने कहा, "राहुल गांधी को कूड़ेदान का बड़ा अनुभव है। उन्होंने मनमोहन जी का एक ऑर्डिनेंस फाड़ कर कूड़ेदान में फेंक दिया था। उन्होंने 13-14 साल में पूरी कांग्रेस को कूड़ेदान में फेंक दिया। कांग्रेस के… pic.twitter.com/xhbIntuEJI
— ANI_HindiNews (@AHindinews) May 23, 2024
ಇದೇ ವೇಳೆ ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಹೇಳಿಕೆ ನೀಡಿದ್ದ ಅವರು, ಜೂನ್ 4 ರ ನಂತರ ಕಾಂಗ್ರೆಸ್ ಇಲ್ಲಿಯವರೆಗೆ ಕಡಿಮೆ ಸ್ಥಾನಗಳನ್ನು ಗೆದ್ದ ಪಕ್ಷವಾಗಲಿದೆ ಎಂದು ಭವಿಷ್ಯ ನುಡಿದಿದ್ದರು.