ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (83) (Acharya Satyendra Das) ಅವರು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ (SGPGI) ಬುಧವಾರ ನಿಧನರಾಗಿದ್ದಾರೆ.
ಪಾರ್ಶ್ವವಾಯುವಿನಿಂದ (Brain Stroke) ಬಳಲುತ್ತಿದ್ದ 83 ವರ್ಷದ ಸತ್ಯೇಂದ್ರ ದಾಸ್ ಅವರನ್ನು ಫೆಬ್ರುವರಿ 3ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ: ಉದಯಗಿರಿ ದಾಂಧಲೆಗೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ
1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ ಸತ್ಯೇಂದ್ರ ದಾಸ್ ಅವರು ರಾಮ ಮಂದಿರದ ಅರ್ಚಕರಾಗಿದ್ದರು. ಇದನ್ನೂ ಓದಿ: 2025ರಲ್ಲಿ ಹಜ್ ಯಾತ್ರೆಗೆ ಮಕ್ಕಳು ನಿಷೇಧ – ಕಾರಣ ಏನು ಗೊತ್ತಾ?
‘ನಿರ್ವಾಣಿ’ ಅಖಾಡದಿಂದ ಬಂದ ಸತ್ಯೇಂದ್ರ ದಾಸ್ ಅವರು ಅಯೋಧ್ಯೆಯ ಪ್ರಮುಖ ಸಂತರಲ್ಲಿ ಒಬ್ಬರಾಗಿದ್ದರು. ಅಯೋಧ್ಯೆ ಮತ್ತು ರಾಮ ಮಂದಿರದ ಬೆಳವಣಿಗೆಗಳ ಬಗ್ಗೆ ಮಾಹಿತಿಯುಳ್ಳವರಾಗಿದ್ದರು.
ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕವಾಗಿ ನಿರ್ಮಿಸಿದ್ದ ಟೆಂಟ್‌ನಲ್ಲಿ ರಾಮ ಲಲ್ಲಾ ವಿಗ್ರಹವನ್ನು ಇಟ್ಟುಕೊಂಡು ಸತ್ಯೇಂದ್ರ ದಾಸ್ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ನಿಮಿಷಾಂಭ ದೇವಸ್ಥಾನದಲ್ಲಿ ಮಾಘ ಹುಣ್ಣಿಮೆ ಸಂಭ್ರಮ – ಕಾವೇರಿ ನದಿಯಲ್ಲಿ ಪುಣ್ಯಸ್ನಾನ