ಪಾಟ್ನಾ: ರಂಗು ರಂಗಿನ ಬಣ್ಣಗಳನ್ನು ಎರಚಿಕೊಂಡು ಹೋಳಿ ಆಚರಣೆ ನಡೆಯುತ್ತಿರುವಾಗಲೇ, ದುಷ್ಕರ್ಮಿಗಳು ಆ್ಯಸಿಡ್ ಎರಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬಿಹಾರದ ನಳಂದಾ ಜಿಲ್ಲೆಯಲ್ಲಿ, ಹೋಳಿ ಆಚರಣೆ ವೇಳೆ ವ್ಯಕ್ತಿಯೋರ್ವನ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಈ ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕಳಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ನಳಂದಾ ಜಿಲ್ಲೆಯ ಎಸ್‍ಡಿಪಿಒ ಕೃಷ್ಣ ಮುರಾರಿ ಪ್ರಸಾದ್ ತಿಳಿಸಿದ್ದಾರೆ.ಇದನ್ನೂ ಓದಿ:ಸೋಶಿಯಲ್ ಮೀಡಿಯಾ ಸ್ಟಾರ್ ಡಾಲಿ ಭೀಕರ ರಸ್ತೆ ಅಪಘಾತದಲ್ಲಿ ಸಾವು
ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಗ್ರಾಮಸ್ಥರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳದಲ್ಲಿ ಭಾರಿ ಪೊಲೀಸರನ್ನು ನಿಯೋಜಿಸಲಾಗಿದೆ. . ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು