Latest

ಆ್ಯಸಿಡ್ ದಾಳಿ ಪ್ರಕರಣ, ಯುವತಿ ಪರಿಸ್ಥಿತಿ ಗಂಭೀರವಾಗಿದೆ: ಡಿಸಿಪಿ ಸಂಜೀವ್ ಪಾಟೀಲ್

- ಶೌಚಾಲಯಕ್ಕೆ ಬಳಸುವ ಆ್ಯಸಿಡ್‍ನಿಂದ ದಾಳಿ

ಬೆಂಗಳೂರು: ಆ್ಯಸಿಡ್ ದಾಳಿ ಪ್ರಕರಣ ಸಂಬಂಧಿಸಿದಂತೆ ಯುವತಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ಮುತ್ತೂಟ್ ಫೈನಾನ್ಸ್ ನಲ್ಲಿ ಕೆಲಸ ಮಾಡ್ತಿದ್ದಳು. ಇಂದು ಬೆಳಗ್ಗೆ ಎಂಟೂವರೆ ಸುಮಾರಿಗೆ ಯುವತಿ ತಂದೆ ಬೈಕ್‍ನಲ್ಲಿ ಕರೆದುಕೊಂಡು ಬಂದು ಡ್ರಾಪ್ ಮಾಡಿ ಹೋಗಿದ್ರು. ಯುವತಿ ತಂದೆ ಡ್ರಾಪ್ ಮಾಡಿ ಹೋದ ಕೆಲವೇ ಕ್ಷಣದಲ್ಲಿ ಆರೋಪಿ ನಾಗೇಶ್, ಯುವತಿ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವತಿ ಮೇಲೆ ಪಾಗಲ್ ಪ್ರೇಮಿಯಿಂದ ಆ್ಯಸಿಡ್ ಅಟ್ಯಾಕ್!

ಮೊದಲೇ ಆ್ಯಸಿಡ್ ಹಾಕಲು ಆರೋಪಿ ಸಿದ್ಧತೆ ಮಾಡ್ಕೊಂಡು ಬಂದಿದ್ದ. ಸದ್ಯ ಯುವತಿ ಪರಿಸ್ಥಿತಿ ಗಂಭೀರವಾಗಿದೆ. ಒಂದು ವಾರಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಶೌಚಾಲಯಕ್ಕೆ ಬಳಸುವ ಆ್ಯಸಿಡ್‍ನಿಂದ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಸದ್ಯ ಕೃತ್ಯಕ್ಕೆ ಬಳಸಿದ್ದ ಆ್ಯಸಿಡ್ ಯಾವುದು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತದೆ ಎಂದು ಡಿಸಿಪಿ ಹೇಳಿದ್ದಾರೆ.

Leave a Reply

Your email address will not be published.

Back to top button