ಮಂಗಳೂರು: ಕಡಬದಲ್ಲಿ (Kadaba) ಮೂವರು ವಿದ್ಯಾರ್ಥಿನಿಯರ (Students) ಮೇಲೆ ಆ್ಯಸಿಡ್ ದಾಳಿ (Acid Attack) ಪ್ರಕರಣಕ್ಕೆ ಕಾರಣ ಸಿಕ್ಕಿದ್ದು ಆರೋಪಿ ಪ್ರೇಮ ವೈಫಲ್ಯದದಿಂದ (Love Failure) ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಕೇರಳ ಮೂಲದ ಎಬಿನ್ (24) ಎಂಬಿಎ ವಿದ್ಯಾರ್ಥಿಯಾಗಿದ್ದು, ಅಲೀನಾ ಎಂಬ ವಿದ್ಯಾರ್ಥಿನಿಯನ್ನು ಟಾರ್ಗೆಟ್ ಮಾಡಿ ಆ್ಯಸಿಡ್ ದಾಳಿ ನಡೆಸಿದ್ದಾನೆ. ಎಬಿನ್ ಹಾಗೂ ಅಲೀನಾ ಒಂದೇ ಕೋಮಿಗೆ ಸೇರಿದವರಾಗಿದ್ದು ಇವರಿಬ್ಬರಿಗೂ ಪರಿಚಯವಿತ್ತು. ಇದನ್ನೂ ಓದಿ: ಕಡಬದಲ್ಲಿ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ
Advertisement
ಈತನ ಪ್ರೇಮ ನಿವೇದನೆಯನ್ನು ಒಪ್ಪದ್ದಕ್ಕೆ ಅಲೀನಾಳ ಮೇಲೆ ದಾಳಿ ನಡೆಸಿದ್ದಾನೆ. ಘಟನೆಯಿಂದ ಅಲೀನಾ ಗಂಭೀರವಾಗಿ ಗಾಯಗೊಂಡಿದ್ದು, ಪಕ್ಕದಲ್ಲೇ ಇದ್ದ ಉಳಿದಿಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕಾಲುವೆಗೆ ಉರುಳಿದ ಕಾರು – ಮೂವರು ಸಾವು, ಮೂವರು ನಾಪತ್ತೆ
Advertisement
Advertisement
ಎಬಿನ್ ಕೇರಳ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿಯಾಗಿದ್ದು, ಅಲೀನಾಳನ್ನು ಟಾರ್ಗೆಟ್ ಮಾಡಿ ಬಂದಿದ್ದ. ಆರೋಪಿ ಶಾಲಾ ಯೂನಿಫಾರ್ಮ್‌ನಲ್ಲಿ ಬಂದಿದ್ದು, ರಬ್ಬರ್ ಹಾಲು ಶೇಖರಣೆಗೆ ಬಳಸುವ ಆ್ಯಸಿಡ್‌ನ್ನು ವಿದ್ಯಾರ್ಥಿನಿಯ ಮೇಲೆ ಎರಚಿದ್ದಾನೆ. ಹೀಗಾಗಿ ಹೆಚ್ಚಿನ ಪ್ರಮಾಣದ ಅಪಾಯ ತಪ್ಪಿದೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ
Advertisement
ಈ ವೇಳೆ ಈಕೆ ಜೊತೆ ಕುಳಿತು ಓದುತ್ತಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರ ಮೇಲೂ ಆ್ಯಸಿಡ್ ಬಿದ್ದಿದೆ. ಗಾಯಗೊಂಡವರು ದ್ವಿತೀಯ ಪಿಯುಸಿಯ ವಿಜ್ಞಾನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ರಿಷ್ಯಂತ್, ಪುತ್ತೂರು ಎಸಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಸೀದಿ ಬಳಿಯಿರುವ ಭಗವಾಧ್ವಜ ತೆರವುಗೊಳಿಸಲು ಪ್ಲ್ಯಾನ್ ಆರೋಪ; ಮಾಜಿ ಶಾಸಕನ ವಿರುದ್ಧ ಕೇಸ್
ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿದ್ದ ಧ್ವಜಸ್ತಂಭದ ಕಟ್ಟೆಯಲ್ಲಿ ಕುಳಿತು ಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆ ನಡೆದ ಬಳಿಕ ಆರೋಪಿ ಎಬಿನ್‌ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಎಬಿನ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನಲ್ಲಿ ವಿಶೇಷ ಟೀಂನಿಂದ 1,000 ಕ್ಕೂ ಅಧಿಕ ಸಿಸಿಟಿವಿ ಪರಿಶೀಲನೆ