ನವದೆಹಲಿ: ಶಾಲಾ ಬಾಲಕಿಯ (School Girl) ಮೇಲೆ ಹಾಡಹಗಲೇ ದುಷ್ಕರ್ಮಿಗಳು ಆ್ಯಸಿಡ್ (Acid) ದಾಳಿ ಮಾಡಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (NewDelhi) ನಡೆದಿದೆ.
ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಶಾಲಾ ಬಾಲಕಿಯ ಮೇಲೆ ದುಷ್ಕರ್ಮಿ ಆ್ಯಸಿಡ್ ಎರಚಿದ ಘಟನೆ ನಡೆದಿದೆ. ಬಾಲಕಿಯು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಇಬ್ಬರು ಕಿರಾತಕರು ಬೈಕ್ನಲ್ಲಿ ಬಂದಿದ್ದಾರೆ. ಈ ವೇಳೆ ಹಿಂದೆ ಕುಳಿತಿದ್ದ ಕಿರಾತಕ ಬಾಲಕಿಯ ಮುಖದ ಮೇಲೆ ಆ್ಯಸಿಡ್ ಎರಚಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
- Advertisement 2
- Advertisement 3
ಘಟನೆಯು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದ್ದು, ತೀವ್ರ ಗಾಯಗೊಂಡ ಆ್ಯಸಿಡ್ ಸಂತ್ರಸ್ತೆಯನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಮತ್ತು ಡಿಸಿಪಿ ದ್ವಾರಕಾ ಆಸ್ಪತ್ರೆಗೆ ಹೋಗಿದ್ದು, ಬಾಲಕಿಯ ಕುಟುಂಬಸ್ಥರೊಂದಿಗೆ ಮಾತನಾಡಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ಅನೈತಿಕ ಸಂಬಂಧವಿದೆ ಎಂದು ಅನುಮಾನಿಸಿ ಗೆಳತಿಗೆ ಕೋಲಿನಿಂದ ಥಳಿಸಿ ಕೊಂದ
- Advertisement 4
ದೆಹಲಿ ಪೊಲೀಸರ ಪ್ರಕಾರ, ಬೆಳಗ್ಗೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ನಂತಹ ವಸ್ತು ಬಳಸಿ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಘಟನೆಯ ವೇಳೆ ಬಾಲಕಿಯು ತಂಗಿಯೊಂದಿಗೆ ಇದ್ದಳು. ಪರಿಚಿತ ಇಬ್ಬರ ಮೇಲೆ ಆಕೆ ಅನುಮಾನ ವ್ಯಕ್ತಪಡಿಸಿದ್ದಾಳೆ. ಸದ್ಯ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬಂಡೀಪುರದಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸಾವು