ಬೀದರ್: ಅಪರಿಚಿತ ವ್ಯಕ್ತಿಗಳು ಯುವಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾದ ಘಟನೆ ಬೀದರ್ನ ಹನುಯಮಾನ್ ನಗರದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಆಸೀಫ್ ಆ್ಯಸಿಡ್ ದಾಳಿಗೆ ಒಳಗಾದ ಯುವಕ. ಆಸೀಫ್ ಮುಖದ ಮೇಲೆ ಆ್ಯಸಿಡ್ ಬಿದ್ದ ಪರಿಣಾಮ ಮುಖದ ಮೇಲೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಆಸೀಫ್ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಆ್ಯಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು ಯಾರು ಹಾಗೂ ಏಕೆ ದಾಳಿ ನಡೆಸಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಗಾಂಧಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.