ಪಾಟ್ನಾ: ಕೆಲಸದ ಮಾಲೀಕನ ಹೆಂಡತಿ ಜೊತೆ ಓಡಿಹೋಗಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಥಳಿಸಿ ಆತನ ಕಣ್ಣುಗಳಿಗೆ ಆ್ಯಸಿಡ್ ಇಂಜೆಕ್ಷನ್ ನೀಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಇಲ್ಲಿನ ಪಿಪ್ರಾ ಚೌಕ್‍ನ ಉಪಹಾರಗೃಹವೊಂದರಲ್ಲಿ ಕಳೆದ ರಾತ್ರಿ ವ್ಯಕ್ತಿಯ ಮೇಲೆ ದಾಳಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿರೋ 30 ವರ್ಷದ ವ್ಯಕ್ತಿಯ ಕಣ್ಣುಗಳಿಗೆ ಆ್ಯಸಿಡ್ ಇಂಜೆಕ್ಷನ್ ನೀಡಿದ್ರಿಂದ ಈಗ ಆತ ತನ್ನ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಡಿಎಸ್‍ಪಿ ಬಿಕೆ ಸಿಂಗ್ ಹೇಳಿದ್ದಾರೆ.
Advertisement
ಸಂತ್ರಸ್ತ ವ್ಯಕ್ತಿ ಮೂಲತಃ ಸಮಷ್ಟಿಪುರದವನು ಎಂದು ವರದಿಯಾಗಿದೆ. ನಾನು ತೇಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಬರೌನಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲಕನಾಗಿ ಕೆಲಸ ಮಾಡುತ್ತಿದೆ. ಅಲ್ಲಿ ಮಾಲೀಕನ ಹೆಂಡತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.
Advertisement
ಫೆಬ್ರವರಿ 6ರಂದು ಚಾಲಕ ತನ್ನ ಪ್ರಿಯತಮೆಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದ. ಬಳಿಕ ಮಹಿಳೆಯ ಗಂಡ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು ಎಂದು ಡಿಎಸ್‍ಪಿ ಹೇಳಿದ್ದಾರೆ.
Advertisement
ನಂತರ ಫೆಬ್ರವರಿ 16ರಂದು ಮಹಿಳೆ ತೇಗ್ರಾಗೆ ವಾಪಸ್ ಬಂದು ಸ್ಥಳೀಯ ಕೋರ್ಟ್‍ನಲ್ಲಿ ಆಕೆಯ ಹೇಳಿಕೆ ದಾಖಲಿಸಲಾಗಿತ್ತು. ಹೆಂಡತಿಯನ್ನ ಮನೆಗೆ ಕರೆದುಕೊಂಡು ಹೋಗುವಂತೆ ಕೋರ್ಟ್ ಮಹಿಳೆಯ ಗಂಡನಿಗೆ ಹೇಳಿತ್ತು. ಮಹಿಳೆ ಇದ್ದಕ್ಕಿದ್ದಂತೆ ವಾಪಸ್ ಬಂದಿದ್ದೇಕೆ ಹಾಗೂ ಆಕೆ ಕೋರ್ಟ್‍ನಲ್ಲಿ ನೀಡಿದ ಹೇಳಿಕೆ ಏನು ಎಂಬುದು ಸ್ಪಷ್ಟವಾಗಿಲ್ಲ.
Advertisement
ಕಳೆದ ಸಂಜೆ ಮಹಿಳೆಯ ಸಂಬಂಧಿ ಚಾಲಕನಿಗೆ ಕರೆ ಮಾಡಿದ್ದು, ಮಹಿಳೆ ನಿನ್ನೊಂದಿಗೆ ಜೀವನ ನಡೆಸಲು ಬಯಸಿದ್ದಾಳೆ. ತೇಗ್ರಾ ಪೊಲೀಸ್ ಠಾಣೆಗೆ ಬಂದು ಆಕೆಯನ್ನ ಕರೆದುಕೊಂಡು ಹೋಗು ಅಂತ ಹೇಳಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಠಾಣೆಗೆ ಸುಮಾರು 1 ಕಿ.ಮೀ ದೂರದಲ್ಲೇ 20 ಜನರ ತಂಡ ಚಲಕನನ್ನು ತಡೆದಿದ್ದು, ಉಪಹಾರಗೃಹಕ್ಕೆ ಕರೆದುಕೊಂಡು ಹೋಗಿ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಆತನ ಕಣ್ಣುಗಳಿಗೆ ಸಿರಿಂಜ್‍ನಿಂದ ಆ್ಯಸಿಡ್ ಇಂಜೆಕ್ಟ್ ಮಾಡಿದ್ದಾರೆ ಎಂದು ಡಿಎಸ್‍ಪಿ ತಿಳಿಸಿದ್ದಾರೆ.
ಬಳಿಕ ಚಾಲಕನನ್ನು ಭಗವಾನ್‍ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಹನಮಾನ್ ಚೌಕ್ ಬಳಿ ಎಸೆದು ಹೋಗಿದ್ದಾರೆ. ದಾರಿಹೋಕರೊಬ್ಬರು ಚಾಲಕನನ್ನ ಬೇಗುಸಾರೈನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.