ವರಲಕ್ಷ್ಮಿ ಶರತ್ಕುಮಾರ್ ತಮ್ಮ ಅಭಿಮಾನಿಗಳಿಗೆ ಮಾರ್ಚ್ 1ರಂದು ಗುಡ್ ನ್ಯೂಸ್ ಕೊಟ್ಟಿದ್ದರು. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆದರು. ಎಂಗೇಜ್ಮೆಂಟ್ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನಂತರ ಈ ಕುರಿತಂತೆ ಸಾಕಷ್ಟು ನೆಗೆಟಿವ್ ಮಾತುಗಳು ಕೇಳಿ ಬಂದಿದ್ದವು. ಅದಕ್ಕೆಲ್ಲ ವರಲಕ್ಷ್ಮಿ ಉತ್ತರ ಕೊಟ್ಟಿದ್ದಾರೆ. ಇದು ದಿಢೀರ್ ಬೆಳವಣಿಗೆ ಅಲ್ಲ, ನನ್ನ ಭಾವಿಪತಿ ನನಗೆ 14 ವರ್ಷಗಳಿಂದಲೂ ಪರಿಚಯ ಎಂದಿದ್ದಾರೆ.
Advertisement
ವರಲಕ್ಷ್ಮಿ ಶರತ್ಕುಮಾರ್ (Varalaxmi Sarathkumar) ಅವರು ನಿಕೋಲಾಯ್ ಸಚ್ದೇವ್ (Nicholai Sachdev) ಎಂಬುವರ ಜೊತೆ ಮದುವೆ ನಿಶ್ಚಯವಾಗಿದೆ. ಇವರು ಅಥ್ಲೆಟ್ ಆಗಿದ್ದು ವೇಟ್ಲಿಫ್ಟಿಂಗ್ನಲ್ಲಿ ಹೆಸರು ಮಾಡಿದ್ದಾರೆ. ಈಗಾಗಲೇ ಅವರಿಗೆ ಮದುವೆಯಾಗಿದ್ದು, 15 ವರ್ಷದ ಮಗಳಿದ್ದಾಳೆ ಎನ್ನಲಾಗ್ತಿದೆ. ಇವರ ಜೊತೆ ವರಲಕ್ಷ್ಮಿ ನಿಶ್ಚಿತಾರ್ಥ ಹಲವು ಚರ್ಚೆಗೆ ಕಾರಣವಾಗಿದೆ.
Advertisement
Advertisement
ನಿಕೋಲಾಯ್ ಅವರು ಖ್ಯಾತ ಮಾಡೆಲ್ ಕವಿತಾ (Kavitha) ಅವರನ್ನು ಮದುವೆಯಾಗಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎನ್ನಲಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಎಂಗೇಜ್ ಆದರು. ನಿಕೋಲಾಯ್ ಹಾಗೂ ಕವಿತಾ ಡಿವೋರ್ಸ್ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ.
Advertisement
ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್ದೇವ್ ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮುಂಬೈನ ಖಾಸಗಿ ರೆಸಾರ್ಟ್ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.