ಬೆಂಗಳೂರು: ಖಾಸಗಿ ವಾಹಿನಿಯ ಡ್ರಾಮಾ ಜೂನಿಯರ್ಸ್ ಎರಡನೇ ಆವೃತ್ತಿಯ ಸಂಚಿಕೆಯಲ್ಲಿ ಬ್ರಾಹ್ಮಣ ವೃತ್ತಿಗೆ ಮತ್ತು ಜಾತಿಗೆ ಅವಮಾನವಾಗಿದೆ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಡ್ರಾಮಾ ಜೂನಿಯರ್ಸ್ ಕಾರ್ಯಕ್ರಮದಲ್ಲಿ ಪ್ರಸಾರವಾದ ಎಪಿಸೋಡ್ ಒಂದರ ಬಗ್ಗೆ ಉಡುಪಿ ಪೇಜಾವರ ಮಠದಲ್ಲಿ ಖಂಡನಾ ಸಭೆ ನಡೆಯಿತು. ಬ್ರಾಹ್ಮಣ ಜಾತಿಗೆ ಜೊತೆಗೆ ವೃತ್ತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಯುವ ಬ್ರಾಹ್ಮಣ ಪರಿಷತ್ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಮಾಡುವ ಮೂಲಕ ಖಂಡಿಸಲಾಯ್ತು.
Advertisement
Advertisement
ಈ ಸಂದರ್ಭ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ಬ್ರಾಹ್ಮಣ ವೃತ್ತಿಯ ಅವಹೇಳನವಾಗಿದೆ. ಇದು ನಮಗೆ ದುಃಖವುಂಟು ಮಾಡಿದೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಸಣ್ಣ ಮಕ್ಕಳ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಕಾರ್ಯ ಮಾಡದಿರಿ. ಇದನ್ನು ನಾವು ಸರ್ವತಾ ಒಪ್ಪಲು ಸಾಧ್ಯವಿಲ್ಲ. ಕ್ಷಮೆ ಯಾಚನೆ ಮಾಡದೆ ಇದ್ದಲ್ಲಿ ಈ ಬಗ್ಗೆ ತೀವ್ರ ಪ್ರತಿಭಟನೆ ಮಾಡುತ್ತೇನೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಮೂಲಕ ಯುವ ಬ್ರಾಹ್ಮಣ ಪರಿಷತ್ ಮನವಿಯನ್ನು ನೀಡುವುದಾಗಿ ಹೇಳಿದೆ.
Advertisement
ಕಾರ್ಯಕ್ರಮದಲ್ಲಿ ಪುರೋಹಿತ ವರ್ಗ, ಬ್ರಾಹ್ಮಣರನ್ನು ಅವಹೇಳನ ಮಾಡಲಾಗಿದೆ ಎಂದು ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಆರೋಪಿಸಿದೆ. ಈ ಸಂಚಿಕೆಯಲ್ಲಿ ಮುಗ್ಧ ಮಕ್ಕಳನ್ನು ಇಟ್ಟುಕೊಂಡು ಬ್ರಾಹ್ಮಣರನ್ನು ತೇಜೋವಧೆ ಮಾಡಲಾಗಿದೆ. ಇಂತಹ ಕಾರ್ಯಕ್ರವiಗಳಿಗೆ ಅವಕಾಶ ನೀಡಬಾರದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬ್ರಾಹ್ಮಣ ಮಹಾಸಭಾ ಪತ್ರ ಬರೆದಿದೆ. ಅಲ್ಲದೇ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದೆ