ಜ್ಞಾನಪೀಠ ಪ್ರಶಸ್ತಿ ಪುರಸ್ಕೃತಿ ಲೇಖಕ ಚಂದ್ರಶೇಖರ್ ಕಂಬಾರ್ ಅವರಿಗೆ ಸಿನಿಮಾ ರಂಗ ಹೊಸದಲ್ಲ. ಈಗಾಗಲೇ ಅದೆಷ್ಟೋ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಂಭಾಷಣೆ ಬರೆದಿದ್ದಾರೆ. ಇವರ ಅನೇಕ ಕೃತಿಗಳು ಸಿನಿಮಾಗಳಾಗಿವೆ. ತುಂಬಾ ವರ್ಷಗಳ ನಂತರ ಕಂಬಾರರು ಬಣ್ಣ ಹಚ್ಚಿದ್ದಾರೆ. ಅದು ಅತಿಥಿ ಪಾತ್ರದಲ್ಲಿ ಎನ್ನುವುದು ವಿಶೇಷ. ಎನ್.ಎಸ್. ಶಂಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈ ಚಿತ್ರಕ್ಕೆ ಈಗ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ: ಚಾರ್ಲಿ 777 ತೆರಿಗೆ ವಿನಾಯತಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅಸಮಾಧಾನ ಏಕೆ?
Advertisement
ರಾಜಮೌಳಿ ನಿರ್ದೇಶನದಲ್ಲಿ ಈ ಹಿಂದೆ ‘ಈಗ’ ಎನ್ನುವ ಸಿನಿಮಾ ಮೂಡಿ ಬಂದಿತ್ತು. ಈ ಸಿನಿಮಾದಲ್ಲಿ ಸುದೀಪ್ ಪ್ರಮುಖ ಪಾತ್ರ ಮಾಡಿದ್ದರು. ಆ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇರದೇ ಇದ್ದರೂ, ಕನ್ನಡದ ಈಗ ಹೊಸದೊಂದು ಕಥೆಯನ್ನು ಪ್ರೇಕ್ಷಕರು ಮುಂದೆ ತೆರೆದಿಡಲಿದೆ. ಮೊನ್ನೆಯಷ್ಟೇ ಈ ಚಿತ್ರಕ್ಕೆ ಮುಹೂರ್ತವಾಗಿದ್ದು, ಈ ಸಮಾರಂಭದಲ್ಲಿ ಗಿರೀಶ್ ಕಾಸರವಳ್ಳಿ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.
Advertisement
Advertisement
ಮುಹೂರ್ತದ ದಿನದಂತೆ ಮೊದಲ ದೃಶ್ಯಕ್ಕೆ ಗಿರೀಶ್ ಕಾಸರವಳ್ಳಿ ಕ್ಯಾಮೆರಾಗೆ ಚಾಲನೆ ನೀಡಿದರೆ, ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ, ನಟಿ ಸುಂದರರಾಜ್ ಆರಂಭ ಫಲಕ ತೋರಿದರು. ಡಾ.ಚಂದ್ರಶೇಖರ್ ಕಂಬಾರ ಅವರು ನಾಯಕಿ ಶ್ರುತಿ ಹರಿಹರ್ ಅವರಿಗೆ ಶಾರದಾ ಪುರಸ್ಕಾರ ನೀಡುವ ದೃಶ್ಯದಲ್ಲಿ ಕಾಣಿಸಿಕೊಂಡರು. ಕನ್ನಡ ಉಪನ್ಯಾಸಕ ರಾಜಪ್ಪ ದಳವಾಯಿ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ಪಾತ್ರ ಮಾಡುತ್ತಿದ್ದಾರೆ.