ಬೆಂಗಳೂರು: ಪಿಎಸ್‌ಐ ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ಬೆಂಗಳೂರಿನಲ್ಲಿ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನೂ ಕೇಳಿಲ್ಲ. ಆದರೆ, ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು? ಅವರ ಅರ್ಹತೆ ಏನೆಂಬುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನೂ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್‌ನವರಾಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್
Advertisement
Advertisement
ಇದೇ ವೇಳೆ `ಕಳೆದ 15 ದಿನಗಳ ಹಿಂದೆ ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಇ-ಮೇಲ್ ಸಿರಿಯಾ ಹಾಗೂ ಪಾಕಿಸ್ತಾನದಿಂದ ಬಂದಿದೆ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಇ-ಮೇಲ್ ಮೂಲವನ್ನು ಪತ್ತೆಹಚ್ಚಲಾಗುವುದು. ಈ ಕುರಿತು ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ಪೊಲೀಸ್ ಆಯುಕ್ತರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಯೂನಿಫಾರ್ಮ್ ಹಾಕ್ಕೊಂಡು ಬಿಲ್ಡಪ್
Advertisement
ಇವೆಲ್ಲವೂ ಆಗಾಗ್ಗೆ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನಗಳಾಗುತ್ತವೆ. ಕಳೆದ ವರ್ಷವೂ ಆಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇ-ಮೇಲ್ ಮೂಲವನ್ನು ಪತ್ತೆ ಹಚ್ಚಲಾಗುವುದು. ಯಾವ ದೇಶದಿಂದ ಬಂದಿದೆ ಎಂದು ಗೊತ್ತಾಗುತ್ತದೆ. ಕೆಲವು ಸಂದರ್ಭದಲ್ಲಿ ಆ ದೇಶದ ಅಧಿಕಾರಿಗಳಿಗೆ ತಿಳಿಸಿ, ಕೆಲವರನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.