ಬೆಂಗಳೂರು: ಪ್ರಧಾನಿಗಳ ಆತ್ಮನಿರ್ಭರ್ ಭಾರತ ಹಾಗೂ ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.
ಬೆಂಗಳೂರಿನ (Bengaluru) ಮೈಸೂರು (Mysuru) ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL)ನ ವಿದ್ಯುನ್ಮಾನ ಘಟಕಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳು ಮತ್ತು ಕಾರ್ಮಿಕರ ಜೊತೆ ಸಂವಾದ ನಡೆಸುತ್ತಾ ಮಾತನಾಡಿದ ಅವರು, ದೇಶದ ಒಟ್ಟಾರೆ ಅಭಿವೃದ್ಧಿಗೆ ಪ್ರಧಾನಿಗಳು ದೊಡ್ಡ ದೊಡ್ಡ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಅವರನ್ನು ನಾವು ನಿಕಟವಾಗಿ ಹಿಂಬಾಲಿಸುತ್ತಿದ್ದೇವೆ. ಸಾರ್ವಜನಿಕ ಸ್ವಾಮ್ಯದ ಉದ್ಯಮಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಎಲ್ಲಾ ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ಪರಿಶೀಲನೆ ಹಾಗೂ ನಿರಂತರವಾಗಿ ಚರ್ಚೆಗಳನ್ನು ನಡೆಸಲಾಗುತ್ತಿದೆ. ಪ್ರಧಾನಿಗಳ ಸ್ಪಷ್ಟ ಮತ್ತು ನಿಖರ ಗುರಿಗಳನ್ನು ಇಟ್ಟುಕೊಂಡಿದ್ದಾರೆ ಎಂದರು.ಇದನ್ನೂ ಓದಿ: ರಾಜ್ಯದ ಎಲ್ಲಾ ಕಾರಾಗೃಹಗಳ ವ್ಯವಸ್ಥೆಯ ವರದಿ ಆಧರಿಸಿ ಶಾಶ್ವತ ಕ್ರಮ: ಪರಮೇಶ್ವರ್
- Advertisement
ಭಾರತವನ್ನು ಮೂರನೇ ಬೃಹತ್ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದು ಹಾಗೂ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಲು ಕೈಗಾರಿಕಾ ಉತ್ಪನ್ನವನ್ನು ಹೆಚ್ಚಳ ಮಾಡುವುದು ಅವರ ಉದ್ದೇಶವಾಗಿದೆ. ಅದಕ್ಕಾಗಿ ಅವರ ಕನಸಿನ ಮೇಕ್ ಇನ್ ಇಂಡಿಯಾ (Mack In India) ಹಾಗೂ ಆತ್ಮನಿರ್ಭರ್ ಭಾರತ್ (Athmanirbar Bharat) ಪರಿಕಲ್ಪನೆಗಳು ಹೆಚ್ಚು ಪರಿಣಾಮಕಾರಿ ಆಗಿವೆ. ಇದೇ ಪರಿಕಲ್ಪನೆ ಅಡಿಯಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಯನ್ನು ಮತ್ತಷ್ಟು ಸಶಕ್ತಗೊಳಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಸ್ವಾಮೀಜಿಗಳು ಭ್ರಷ್ಟಾಚಾರ ವಿರೋಧಿಸಬೇಕು, ಸಪೋರ್ಟ್ ಮಾಡೋದು ಸರಿಯಲ್ಲ- ಛಲವಾದಿ ನಾರಾಯಣಸ್ವಾಮಿ
- Advertisement
ದೇಶದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳ ಪೈಕಿ ಬಿಹೆಚ್‌ಇಎಲ್ ಉತ್ತಮವಾಗಿ ನಡೆಯುತ್ತಿದೆ. ಮೈಸೂರು ಅರಸರು, ಸರ್ ಎಂ.ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಹಿನ್ನೆಲೆಯಲ್ಲಿ ಇದು ಸ್ಥಾಪನೆಯಾಯಿತು. ಕೈಗಾರಿಕೆ ಕ್ಷೇತ್ರದಲ್ಲಿ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ಕೊಟ್ಟಿದೆ. ದೇಶದಲ್ಲಿ ಸಾರ್ವಜನಿಕ ಕೈಗಾರಿಕೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿವೆ. ಇಂತಹ ಸವಾಲಿನ ನಡುವೆಯೂ ಬಿಹೆಚ್‌ಇಎಲ್ ಲಾಭದಾಯಕವಾಗಿ ಮುನ್ನಡೆಯುತ್ತಿದೆ. ವಿದ್ಯುತ್ ಕ್ಷೇತ್ರದಲ್ಲಿ ಕೊಡುಗೆ ಅಸಾಧಾರಣವಾಗಿದೆ. ಥರ್ಮಲ್ ವಿದ್ಯುತ್ ಕ್ಷೇತ್ರದಲ್ಲಿ ಶೇ.40ಕ್ಕೂ ಹೆಚ್ಚು ಮಾರುಕಟ್ಟೆ ಪಾಲನ್ನು ಕಂಪನಿ ಹೊಂದಿದೆ. ಭಾರತೀಯ ಸೇನೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಈ ಕಂಪನಿ ಕೊಡುಗೆ ಅನನ್ಯವಾಗಿದೆ ಎಂದರು. ಇದನ್ನೂ ಓದಿ: ಅಬಕಾರಿ ನೀತಿ ಹಗರಣ; ಬಿಆರ್‌ಎಸ್ ನಾಯಕಿ ಕವಿತಾಗೆ ‘ಸುಪ್ರೀಂ’ ಜಾಮೀನು