Connect with us

Cinema

ಶೀಘ್ರವೇ ಗೆಳತಿ ಜೊತೆ ಆ್ಯಕ್ಷನ್ ಪ್ರಿನ್ಸ್ ನಿಶ್ಚಿತಾರ್ಥ

Published

on

ಬೆಂಗಳೂರು: ಸ್ಯಾಂಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ.

ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಲವ್ ಕಮ್ ಅರೇಂಜ್ಡ್ ಮ್ಯಾರೇಜ್‍ಗೆ ಸಿದ್ಧವಾಗಿದ್ದು ಹುಡುಗಿಯ ಹೆಸರನ್ನು ಸಮಯ ಬಂದಾಗ ರಿವೀಲ್ ಮಾಡುವುದಾಗಿ ಹೇಳಿದ್ದಾರೆ.

ಬಹುದಿನದ ಗೆಳತಿ, ನೆರೆ ಮನೆಯ ಸ್ನೇಹಿತೆ ಜೊತೆ ಧ್ರುವ ಸರ್ಜಾ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ ದಿನ ತಾವು ಶೀಘ್ರದಲ್ಲೇ ಲವ್ ಮ್ಯಾರೇಜ್ ಆಗುವುದಾಗಿ ಹೇಳಿದ್ದರು.

ಕಳೆದ ಕೆಲ ತಿಂಗಳ ಹಿಂದೆ ಧ್ರುವ ಅಣ್ಣ ಚಿರಂಜೀವಿ ಸರ್ಜಾ ಮದುವೆಯಾಗಿತ್ತು. ಮೂಲಗಳ ಪ್ರಕಾರ ತಮ್ಮ ಬಹುಕಾಲದ ಗೆಳತಿಯ ಜೊತೆ ಮದುವೆಯಾಗುವುದಾಗಿ ನಿರ್ಧರಿಸಿದ್ದಾರೆ. ಸಮಯ ಬಂದಾಗ ಎಲ್ಲವನ್ನು ಬಹಿರಂಗಪಡಿಸುವುದಾಗಿ ನಟ ಧ್ರುವ ಸರ್ಜಾ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Click to comment

Leave a Reply

Your email address will not be published. Required fields are marked *

www.publictv.in