ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ತಪ್ಪು ಸಾಬೀತಾದರೆ ಕ್ರಮ ಖಚಿತ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಎಚ್ಚರಿಸಿದ್ದಾರೆ.
ಬೆಂಗಳೂರಿನ (Bengaluru) ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ವಾಲ್ಮೀಕಿ ನಿಗಮದಲ್ಲಿ ಎಸ್ಸಿ-ಎಸ್ಟಿ ವರ್ಗಗಳ ಹಣ ಲೂಟಿ ಮಾಡಲಾಗಿದೆ. ಅವರ ಸಂಪುಟ ಸಚಿವರೇ ರಾಜೀನಾಮೆ ಕೊಟ್ಟಿದ್ದಾರೆ. ಅಕ್ರಮ ಆಗಿದ್ದು 187 ಕೋಟಿ ಅಲ್ಲ, 89 ಕೋಟಿ ಎಂದು ಸಿಎಂ ಅವರೇ ಹೇಳಿದ್ದಾರೆ. ಇಷ್ಟಾದರೂ ಹಣ ವರ್ಗಾವಣೆಗೆ ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ಹಾಗೆ ಹೇಳೋದು ಅವರ ಚಾಣಾಕ್ಷತೆ ಅಂತ ಅಂದುಕೊಂಡಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ
ಎಸ್ಸಿ-ಎಸ್ಟಿ ವರ್ಗಗಳಿಗೆ ಅನ್ಯಾಯ ಆಗಿದೆ. ಈ ಹಣದ ದರೋಡೆಗೆ ಹೊಣೆ ಯಾರು? ರಾಷ್ಟ್ರೀಯ ಬ್ಯಾಂಕ್‌ಗಳ ಅಧಿಕಾರಿಗಳು ತಪ್ಪು ಮಾಡಿದ್ದರೆ ಕ್ರಮ ಆಗಲಿ. ಈಗಾಗಲೇ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ಮೇಲೆ ತನಿಖೆ ನಡೆಯುತ್ತಿದೆ. ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಧಿಕಾರಿಗಳು ತಪ್ಪು ಮಾಡಿದ್ದರೆ ಕ್ರಮ ಖಚಿತ. ಆದರೆ ರಾಜ್ಯ ಸರ್ಕಾರ ಅವರ ಸಚಿವರಾಗಿದ್ದವರ ಮೇಲೆ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್
ಇನ್ನು ಕೇಂದ್ರದಿಂದ ಇ.ಡಿ ದುರ್ಬಳಕೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ಇ.ಡಿ ಇಲ್ಲಿಗೆ ಬಂದು ಕಪ್ಪು ಹಣ ಪತ್ತೆ ಮಾಡಿ ತನಿಖೆ ಮಾಡುತ್ತಿದೆ. ಕಾಂಗ್ರೆಸ್ ಅವರಿಗೆ ಇದು ಇಷ್ಟ ಆಗಲ್ಲ ಅಂತ ಇ.ಡಿಯವರು ಬರದೇ ಇರೋಕ್ಕಾಗುತ್ತಾ? ಇ.ಡಿಯವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕೇಂದ್ರ ಸ್ವಾತಂತ್ರ‍್ಯ ಕೊಟ್ಟಿದೆ ಎಂದು ಟಕ್ಕರ್ ಕೊಟ್ಟರು. ಇದನ್ನೂ ಓದಿ: Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್
ಮುಡಾದಿಂದ ಬಿಜೆಪಿಯವರೂ ಅಕ್ರಮ ಸೈಟುಗಳನ್ನು ಪಡೆದಿದ್ದಾರೆ ಎಂಬ ಕಾಂಗ್ರೆಸ್ ಆರೋಪದ ಕುರಿತು ಮಾತನಾಡಿ, ಕಾಂಗ್ರೆಸ್‌ನವರು ಪ್ರತೀ ಆರೋಪಗಳಿಗೂ ಕೌಂಟರ್ ಕೊಡೋದಷ್ಟೇ ಮಾಡುತ್ತಾರೆ. ಆರೋಪಕ್ಕೆ ಕೌಂಟರ್ ಆರೋಪ ಮಾಡುತ್ತಾರೆ. ಅದು ಕಾಂಗ್ರೆಸ್‌ನವರಿಗೆ ಅಭ್ಯಾಸ ಆಗಿಹೋಗಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ – ಪರಮೇಶ್ವರ್