ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳುವುದಾಗಿ ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ರೋಗ – ಸರ್ಕಾರಿ ಜಿಲ್ಲಾಸ್ಪತ್ರೆ ಹೌಸ್ ಫುಲ್
Advertisement
Advertisement
ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದಿವಂತರ ಒಕ್ಕೂಟದ ಸದಸ್ಯರು, ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ.ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
Advertisement
Advertisement
ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ದೇವಸ್ಥಾನಗಳ ತೆರವುಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಜೊಲ್ಲೆ ಅವರು, ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದಿವಂತರ ಒಕ್ಕೂಟದ ಸದಸ್ಯರಿಗೆ ಆದಷ್ಟು ಬೇಗ ನಿಮ್ಮ ಸಮಸ್ಯೆ ಪರಿಹರಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.