ಬೆಂಗಳೂರು: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭಿಕ್ಷಾಟನೆಯನ್ನು ಎರಡು ಮೂರು ತಿಂಗಳಿನಲ್ಲಿ ನಿಯಂತ್ರಣ ಮಾಡುವ ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Srinivasa Poojary) ತಿಳಿಸಿದ್ದಾರೆ.
Advertisement
ವಿಧಾನ ಪರಿಷತ್ (Vidhana Parishad) ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಅ.ದೇವೇಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಬೆಂಗಳೂರಿನಲ್ಲಿ ಭಿಕ್ಷಾಟನೆ ನಿಯಂತ್ರಿಸುವ ಅನಿವಾರ್ಯತೆ ಇದೆ ಎಂದರು. ಇದನ್ನೂ ಓದಿ: ತಿಂಗಳಾದ್ರೂ ಶಾಲಾ ಆವರಣದ ನೀರು ಹೊರಹಾಕದೇ ನಿರ್ಲಕ್ಷ್ಯ- ಇದು ಹೆಚ್‍ಡಿಕೆ ಸ್ವಕ್ಷೇತ್ರದ ದುಸ್ಥಿತಿ
Advertisement
Advertisement
ಯಾವುದೋ ಮಕ್ಕಳನ್ನು ಬಾಡಿಗೆಗೆ ಪಡೆದು ಅವರಿಗೆ ಮತ್ತು ಬರುವ ಔಷಧಿ ನೀಡಿ ಮಗುವನ್ನು ಎತ್ತಿಕೊಂಡು ಅನುಕಂಪ ಗಿಟ್ಟಿಸಿಕೊಂಡು ಭಿಕ್ಷಾಟನೆ ನಡೆಸಲಾಗುತ್ತಿದೆ. ಭಿಕ್ಷಾಟನೆ ನಂತರ ಆ ಮಗುವನ್ನು ಪೋಷಕರಿಗೆ ವಾಪಸ್ ಕೊಡುವ ಘಟನೆ ನಡೆಯುತ್ತಿದೆ. ಅವರನ್ನು ರಕ್ಷಿಸಬೇಕಿದೆ ಎಂದು ಹೇಳಿದರು.
Advertisement
ಅದೇ ರೀತಿ ವೃದ್ಧರನ್ನು ಬಳಸಿಕೊಂಡು ಭಿಕ್ಷಾಟನೆ ಮಾಡಲಾಗುತ್ತಿದೆ. ತೃತೀಯ ಲಿಂಗಿಗಳು ಕೂಡ ಭಿಕ್ಷಾಟನೆ (Beggar) ಮಾಡುತ್ತಿದ್ದು ಕೆಲ ಕಡೆ ಅಹಿತಕರ ಘಟನೆ ನಡೆಯುತ್ತಿದೆ ಎನ್ನುವುದು ಗಮನಕ್ಕೆ ಬಂದಿದೆ. ಇದರ ನಿಯಂತ್ರಣಕ್ಕಾಗಿಯೇ ಡಿಸಿಪಿ ನೇತೃತ್ವದಲ್ಲಿ 8 ಟಾಸ್ಕ್ ಫೋರ್ಸ್ ರಚಿಸಿದ್ದು, ಭಿಕ್ಷಾಟನೆ ನಿಯಂತ್ರಣಕ್ಕೆ ಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಬಂಧನ ಮಾಡುವಂತಿಲ್ಲದ ಕಾರಣ ಕಾನೂನು ಸಚಿವರ ಜೊತೆ ಚರ್ಚಿಸಿ ಅವರ ರಕ್ಷಣೆಗೆ ಕ್ರಮ ವಹಿಸಲಾಗುತ್ತದೆ. ಎರಡು ಮೂರು ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೂ ಭಿಕ್ಷಾಟನೆ ನಿಯಂತ್ರಣಕ್ಕೆ ಪ್ರಯತ್ನಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.