ಧರ್ಮಸ್ಥಳ ಕೇಸ್‌ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪರಮೇಶ್ವರ್‌ ಎಚ್ಚರಿಕೆ

Public TV
1 Min Read
G Parameshwar

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Case) ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್‌ ಮಾಧ್ಯಮದಲ್ಲಿ (Digital Media) ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ ‌ರಹಸ್ಯ ಬಯಲು; ವಾರಸುದಾರರು ಪತ್ತೆ

ಹೇಟ್‌ ಸ್ಪೀಚ್‌ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ (Hate Speech) ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್‌ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗಳ್ಳುತ್ತೇವೆ ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ 

ಫೇಕ್ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಸರ್ಕಾರ ಈಗ ಮುಂದಾಗಿದ್ದು ವಿಧಾನಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಈಗ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದಾರೆ.

Share This Article