11 ವರ್ಷಗಳ ಬಳಿಕ ‘ಪಿಕೆ’ ನಿರ್ದೇಶಕನ ಜೊತೆ ಕೈಜೋಡಿಸಿದ ಆಮೀರ್ ಖಾನ್

Public TV
1 Min Read
aamir khan rajkumar hirani

ಬಾಲಿವುಡ್ ನಟ ಆಮೀರ್ ಖಾನ್ (Aamir Khan) ಸದ್ಯ ‘ಸಿತಾರೆ ಜಮೀನ್ ಪರ್’ (Sitaare Jameen Par) ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಸಿನಿಮಾ ಬಗ್ಗೆ ಅಪ್‌ಡೇಟ್‌ವೊಂದು ಸಿಕ್ಕಿದೆ. 11 ವರ್ಷಗಳ ಬಳಿಕ ಪಿಕೆ, ಸಂಜು ಸಿನಿಮಾಗಳ ನಿರ್ದೇಶಕ ರಾಜ್‌ಕುಮಾರ್ ಹಿರಾನಿ (Rajkumar Hirani) ಜೊತೆ ನಟ ಕೈಜೋಡಿಸಿದ್ದಾರೆ. ಇದನ್ನೂ ಓದಿ:ಬೆಡ್‌ರೂಮಲ್ಲಿ ಬಿಕಿನಿ ತೊಟ್ಟು ಸೆಲ್ಫಿ ಕ್ಲಿಕ್ಕಿಸಿದ ನಟಿ – ದಿಶಾ ಪಟಾನಿ ಮೈಮಾಟಕ್ಕೆ ಪಡ್ಡೆ ಹುಡುಗರು ಬೋಲ್ಡ್

aamir khan‘ಪಿಕೆ’ ಚಿತ್ರದ ಮೂಲಕ ಸೂಪರ್ ಹಿಟ್ ಕೊಟ್ಟಿದ್ದ ಆಮೀರ್ ಖಾನ್ ಮತ್ತು ರಾಜ್‌ಕುಮಾರ್ ಹಿರಾನಿ ಮತ್ತೆ ಹೊಸ ಸಿನಿಮಾಗಾಗಿ ಒಂದಾಗಿದ್ದಾರೆ. ಭಾರತೀಯ ಸಿನಿಮಾರಂಗ ಪಿತಾಮಹ ಎಂದು ಕರೆಯಲಾಗುವ ‘ದಾದಾ ಸಾಹೇಬ್ ಪಾಲ್ಕೆ’ ಅವರ ಜೀವನ ಚರಿತ್ರೆಯನ್ನು ಸಿನಿಮಾ ರೂಪದಲ್ಲಿ ತರಲು ನಿರ್ಧರಿಸಲಾಗಿದೆ. ಇದನ್ನೂ ಓದಿ:ಬ್ರೇಕಪ್ ಬಳಿಕ ಮಹತ್ವದ ನಿರ್ಧಾರ ಕೈಗೊಂಡ ತಮನ್ನಾ ಭಾಟಿಯಾ

Rajkumar Hirani 2ನಿರ್ದೇಶಕ, ನಿರ್ಮಾಪಕ, ಬರಹಗಾರ ದಾದಾ ಸಾಹೇಬ್ ಪಾಲ್ಕೆ ಅವರು ಸಿನಿಮಾ ರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಜೀವನ ಚರಿತ್ರೆಗೆ ರಾಜ್‌ಕುಮಾರ್ ಹಿರಾನಿ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ. ಆಮೀರ್ ಇದರಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್‌ ಕೆಲಸ ಶುರುವಾಗಿದೆ.

Share This Article