ಜ್ಯೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್- ಅವಿವಾ ಬಿದ್ದಪ್ಪ (Aviva Bidapa) ಮದುವೆ ದಿನಾಂಕ ಫಿಕ್ಸ್ ಆಗಿದೆ. ಈ ಮೂಲಕ ಸುಮಲತಾ ಅಂಬರೀಶ್ (Sumalatha Ambareesh) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಹಲವು ವರ್ಷಗಳ ಅಭಿ- ಅವಿವಾ ಪ್ರೀತಿಗೆ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ.
Advertisement
ಫ್ಯಾಷನ್ ಈವೆಂಟ್‌ವೊಂದರಲ್ಲಿ ಅಭಿಷೇಕ್-ಅವಿವಾ ಭೇಟಿ, 3-4 ವರ್ಷಗಳ ಡೇಟಿಂಗ್ ನಂತರ ಇತ್ತೀಚಿಗೆ ಈ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಂಡಿತ್ತು. ಖ್ಯಾತ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಮಗಳು ಅವಿವಾ ಜೊತೆ ಇದೀಗ ಹಸೆಮಣೆ ಏರಲು ಅಂಬಿ ಪುತ್ರ ಸಜ್ಜಾಗಿದ್ದಾರೆ. ಇದನ್ನೂ ಓದಿ:ಕೆಂಪು ಗುಲಾಬಿ ಅವತಾರ ತಾಳಿದ ನಟಿ ಕಿಯಾರಾ
Advertisement
Advertisement
ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೆ ಸ್ಯಾಂಡಲ್‌ವುಡ್ ಸ್ಟಾರ್ ವೆಡ್ಡಿಂಗ್‌ಗೆ ಸಾಕ್ಷಿಯಾಗಲಿದೆ. ನಟ ಅಭಿಷೇಕ್- ಅವಿವಾ ವಿವಾಹ ಇದೇ ಜೂನ್ 9 ಮತ್ತು 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಜೂನ್ 12ರಂದು ಮಂಡ್ಯದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಸುಮಾರು 10 ಸಾವಿರ ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ.
Advertisement
ಏಪ್ರಿಲ್ 5ರಂದು ಅಭಿಷೇಕ್ (Abhishek Ambareesh) ಮತ್ತು ಸುಮಲತಾ ಅಂಬರೀಷ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಗೆ ಮದುವೆ ಆಮಂತ್ರಣ ಪತ್ರ ನೀಡಿದ್ದರು. ಈ ವಿಷಯವನ್ನು ಅವರು ಸೋಷಿಯಲ್ ಮೀಡಿಯಾ ಮೂಲಕ ಫೋಟೊ ಸಹಿತ ಹಂಚಿಕೊಂಡಿದ್ದರು. ಈ ಮೂಲಕ ಗಣ್ಯರನ್ನು ಆಹ್ವಾನಿಸಲು ಆರಂಭಿಸಿದ್ದರು.
ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮದುವೆಗೆ ಕೇಂದ್ರದ ಪ್ರಮುಖ ರಾಜಕಾರಣಿಗಳ ಜೊತೆಗೆ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಇನ್ನೂ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್‌ನಿಂದ ಶತ್ರುಘ್ನ ಸಿನ್ಹಾ ಇನ್ನೂ ಹಲವು ಪ್ರಮುಖ ತಾರೆಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಮದುವೆಗೆ ಆಭರಣ, ವಸ್ತ್ರಗಳ ಖರೀದಿ ಜೋರಾಗಿ ನಡೆದಿದ್ದು, ಸ್ವತಃ ವಸ್ತ್ರ ವಿನ್ಯಾಸಕಿ ಆಗಿರುವ ಅವಿವಾ ಬಿದ್ದಪ್ಪ ಅವರೇ ತಮ್ಮ ಹಾಗೂ ಅಭಿಷೇಕ್ ತೊಡಲಿರುವ ಉಡುಗೆಯನ್ನು ಡಿಸೈನ್ ಮಾಡುತ್ತಿರುವುದು ವಿಶೇಷ.