‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾ ರಿಲೀಸ್‌ಗೆ ತಯಾರಿ ನಡೆಯುತ್ತಿರೋ ಬೆನ್ನಲ್ಲೇ, ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಅಭಿಷೇಕ ಅಂಬರೀಶ್ (Abhishek Ambareesh) ಭೇಟಿ ನೀಡಿದ್ದಾರೆ. ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ರಿಲೀಸ್ ಮತ್ತು ಅಭಿಷೇಕ್- ಮಹೇಶ್ ಕುಮಾರ್ (Mahesh Kumar) ನಟನೆಯ ಮುಂದಿನ ಸಿನಿಮಾ ಶೂಟಿಂಗ್ ಶುರು ಮಾಡುವ ಮುನ್ನ, ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಭಿಷೇಕ್ ಜೊತೆ ನಿರ್ದೇಶಕ ಮಹೇಶ್ ಕುಮಾರ್, ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ:ನಮಗೇ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? ರಾಗಿಣಿ ದ್ವಿವೇದಿ ಪ್ರತಿಕ್ರಿಯೆ
ಅಭಿಷೇಕ್- ರಚಿತಾ ರಾಮ್ (Rachita Ram) ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾಗೆ ದುನಿಯಾ ಸೂರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಫಸ್ಟ್ ಲುಕ್ ಮತ್ತು ಹಾಡುಗಳು ಅಭಿಮಾನಿಗಳ ಗಮನ ಸೆಳೆದಿದೆ. ಸದ್ಯದಲ್ಲೇ ಚಿತ್ರದ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
ಯಂಗ್ ರೆಬೆಲ್ ಅಭಿಷೇಕ್ 4ನೇ ಸಿನಿಮಾಗೆ ‘ಮದಗಜ’ ಮಹೇಶ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ.