ರಾಜಕೀಯ ದೃಷ್ಟಿಯಿಂದ ಕಾವೇರಿ ಹೋರಾಟಕ್ಕೆ ಬಂದಿಲ್ಲ: ನಟ ಅಭಿಷೇಕ್ ಸ್ಪಷ್ಟನೆ

Public TV
1 Min Read
Abhishek Ambareesh

ಸ್ಯಾಂಡಲ್ ವುಡ್ ನಟ ಅಭಿಷೇಕ್ ಅಂಬರೀಶ್ (Abhishek Ambarish) ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ರೈತರೊಂದಿಗೆ ಹೋರಾಡುವುದಕ್ಕಾಗಿಯೇ ಅವರು ಮಂಡ್ಯಗೆ (Mandya) ಬಂದಿದ್ದು, ಹೋರಾಟವನ್ನು (Protest) ಇನ್ನಷ್ಟು ತೀವ್ರಗೊಳಿಸುವ ಕುರಿತು ಮಾತನಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಭಿಷೇಕ್, ಯಾವುದೇ ರಾಜಕೀಯ ದೃಷ್ಟಿಯಿಂದ ತಾವು ಇಲ್ಲಿಗೆ ಬಂದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.

MANDYA PROTEST

‘ನಾನು ಯುವಕನಾಗಿದ್ದೀನಿ. ಯಾವುದೇ ರಾಜಕೀಯ ದೃಷ್ಟಿಯಿಂದ ಇಲ್ಲಿ ಬಂದಿಲ್ಲ. ನಾನು ಚಿಕ್ಕದ್ದಿನಿಂದಲೂ ಕಾವೇರಿ ಹೋರಾಟ (Cauvery dispute) ನೋಡಿ ಬೆಳೆದವನು. ಅಪ್ಪಾಜಿ, ಅಮ್ಮ ಎಲ್ಲರೂ ಕಾವೇರಿ ಪರ ಹೋರಾಟ ಮಾಡಿದ್ದಾರೆ. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಕೆಲಸವನ್ನ ಅಮ್ಮ ಮಾಡ್ತಾರೆ. ನಮ್ಮ ನೀರು ಬಿಟ್ರೆ ಮುಂದೆ ಕುಡಿಯುವ ನೀರಿಗೂ ತೊಂದರೆ ಆಗುತ್ತೆ. ನಮ್ಮ ನೀರು, ಜನಕ್ಕೆ ನ್ಯಾಯ ಸಿಗಬೇಕು ಎಂದರು.

 

ಮುಂದುವರೆದು ಮಾತನಾಡಿದ ಅವರು, ‘ಕನ್ನಡ ಚಿತ್ರರಂಗ ಈ ವಿಚಾರದಲ್ಲಿ ಯಾವಾಗಲೂ ಇದ್ದೇ ಇರುತ್ತೆ. ಶೀಘ್ರದಲ್ಲೇ ಅದಕ್ಕೆ ಒಂದು ವೇದಿಕೆ ಸಿದ್ದವಾಗಲಿದೆ. ನಮ್ಮ ಬಳಿ ನೀರು ಇದ್ರೆ ತಮಿಳುನಾಡಿನವ್ರು ನೀರು ಕೇಳಲಿ. ನಮ್ಮ ಬಳಿಯೇ ನೀರು ಇಲ್ಲದಿದ್ದಾಗ ಅವರಿಗೆ ನೀರು ಕೋಡೊದು ಹೇಗೆ.? ಎರಡೂ ರಾಜ್ಯ ಸರ್ಕಾರಗಳು ಕೂತು ಮಾತನಾಡಬೇಕು. ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಬೇಕು ಎಂದು ಪ್ರತಿಭಟನೆಯಲ್ಲಿ ಅಭಿಷೇಕ್ ಅಂಬರೀಶ್ ಹೇಳಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article