ರಾಮನಗರ: ಲವ್ ಯು ರಚ್ಚು ಸಿನಿಮಾ ಚಿತ್ರೀಕರಣ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಜಯ್ ರಾವ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇತ್ತ ಮಂಗಳವಾರ ಚಿತ್ರದ ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
Advertisement
ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ: ಅಜಯ್ ರಾವ್ ರಾಮನಗರ ಜಿಲ್ಲೆ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರಕರಣದ ಎಫ್‍ಐಆರ್ ನಲ್ಲಿ ಇತರರೆಂದು ನಮೂದಿಸಿದ ಹಿನ್ನೆಲೆ ನೀರಿಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆಂದು ತಿಳಿದು ಬಂದಿದೆ. ಇದನ್ನೂ ಓದಿ: ಶೂಟಿಂಗ್ ವೇಳೆ ಫೈಟರ್ ವಿವೇಕ್ ದುರಂತ ಸಾವು – ರಚಿತಾ ರಾಮ್ ಸಂತಾಪ
Advertisement
Advertisement
ಹೇಳಿಕೆ ದಾಖಲಿಸಿದ ರಚಿತಾ ರಾಮ್:
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಬಿಡದಿ ಪೊಲೀಸ್ ಠಾಣೆಯ ಡಿವೈಎಸ್‍ಪಿ ಮೋಹನ್ ಕುಮಾರ್ ಮುಂದೆ ಹಾಜರಗಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಚಿತಾ ರಾಮ್, ನಾನು ಸ್ಥಳದಲ್ಲಿ ಇರಲಿಲ್ಲ, ಮೀಡಿಯಾ, ಸೋಷಿಯಲ್ ಮೀಡಿಯಾದಲ್ಲಿ ನೋಡಿದ್ದೆ. ಹಾಗಾಗಿ ಇಷ್ಟೇ ವಿಚಾರವನ್ನ ತಿಳಿಸಿದ್ದೇನೆ. ನಾನು ಸ್ಥಳದಲ್ಲಿ ಇರಲಿಲ್ಲ, ಅದನ್ನ ಹೇಳಲು ಬಂದಿದ್ದೇನೆ. ಆ ನಟನ ಸಾವು ಹೇಗಾಯ್ತು? ಅಲ್ಲಿ ಏನಾಯ್ತು ಅಂತ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಮಗಾರಿ ವೀಡಿಯೋ ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತಾ ಗೊತ್ತಿರಲಿಲ್ಲ: ಪ್ರತಾಪ್ ಸಿಂಹ ತಿರುಗೇಟು
Advertisement
ನಾನು ಹಳೆ ಶೆಡೂಲ್ ನಲ್ಲಿ ಇದ್ದೇ, ಆದರೆ ಇದು ಹೊಸ ಶೆಡ್ಯೂಲ್ ಶೂಟಿಂಗ್ ನಡೆದಿದೆ. ಫೈಟಿಂಗ್ ಸೀನ್ ನಲ್ಲಿ ನಟಿಗೆ ಕೆಲಸ ಇರಲ್ಲ. ಹಾಗಾಗಿ ಯಾವ ರೀತಿಯ ಶೂಟ್ ಕಂಪೋಸ್ ಮಾಡಿದ್ದರೂ ಎಂಬ ಮಾಹಿತಿ ಇಲ್ಲ. ಉದ್ದೇಶಪೂರ್ವಕವಾಗಿ ಯಾವುದೇ ಘಟನೆ ನಡೆದಿಲ್ಲ. ಆದರೆ ಯಾವುದೇ ದೃಶ್ಯಗಳಿದ್ದರೂ ಮುಂಜಾಗ್ರತ ಕ್ರಮವಹಿಸಬೇಕು. ಇನ್ನೂ ಅಜಯ್ ರಾವ್ ಸ್ಥಳದಲ್ಲಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಇವತ್ತಿಗೆ ನನ್ನ ವಿಚಾರಣೆ ಮುಗಿದಿದೆ, ಎಲ್ಲಾ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ಹೇಳಿದರು.