ಇತ್ತೀಚೆಗೆ ಸೆಲೆಬ್ರಿಟಿಗಳು ವಿಚ್ಛೇದನ (Divorce) ತೆಗೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಪ್ರತಿ ದಿನ ಒಬ್ಬರಲ್ಲ ಒಬ್ಬರ ಡಿವೋರ್ಸ್ ಸುದ್ದಿಗಳು ಬೆಳಕಿಗೆ ಬರುತ್ತಲೇ ಇವೆ, ಈಗ ಆ ಸಾಲಿಗೆ ಸ್ಯಾಂಡಲ್‌ವುಡ್‌ನ ನಟ ಅಜಯ್ ರಾವ್ (Ajay Rao) ಕೂಡ ಸೇರಿಕೊಂಡಿದ್ದಾರೆ. ಹೌದು. ನಟ ಅಜಯ್ ರಾವ್ ಪತ್ನಿ ಸಪ್ನಾ (Sapna) ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ.
2014ರಲ್ಲಿ ಡಿಸೆಂಬರ್ 18ರಲ್ಲಿ ಪ್ರೀತಿಸಿ ಮದ್ವೆಯಾಗಿದ್ದ (Love Marriage) ಈ ಜೋಡಿ ಇತ್ತೀಚಿಗೆ ಹೊಸ ಮನೆಯ ಗೃಹ ಪ್ರವೇಶ ಮಾಡಿತ್ತು. ಹೊಸಪೇಟೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇತ್ತೀಚೆಗಷ್ಟೇ ಹೊಸ ಮನೆಗೆ ಗೃಹ ಪ್ರವೇಶ ಮಾಡಿತ್ತು ಈ ಜೋಡಿ. ಇದನ್ನೂ ಓದಿ: `ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್
ಇದೀಗ ನಟನ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಪತ್ನಿ ಸ್ವಪ್ನ ರಾವ್ ವಿಚ್ಛೇದನ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಜಯ್ ರಾವ್ ಸಪ್ನಾ ದಂಪತಿಗೆ ಓರ್ವ ಪುತ್ರಿ ಕೂಡ ಇದ್ದಾರೆ. ಇದನ್ನೂ ಓದಿ: ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ
11 ವರ್ಷಗಳ ಬಳಿಕ ದೂರಾಗಲು ನಿರ್ಧರಿಸಿದ್ದೇಕೆ?
2014ರಲ್ಲಿ ಮದ್ವೆಯಾಗಿದ್ದ ಈ ಜೋಡಿ 11 ವರ್ಷಗಳ ಬಳಿಕ ದಾಂಪತ್ಯ ಜೀವನಕ್ಕೆ ವಿದಾಯ ಹೇಳಲು ಬಯಸಿದೆ. ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತ್ನಿ ದೂರು ದಾಖಲಿಸಿದ್ದಾರೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್