‘ಪುಷ್ಪ 2′ (Pushpa 2) ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಇಂದು (ಡಿ.24) ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ (Allu Arjun) ಅವರನ್ನು ಸತತ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಇದನ್ನೂ ಓದಿ:ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ
ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಎಸಿಪಿ ರಮೇಶ್ ಕುಮಾರ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ನಾಯಕ್ ಅವರಿಂದ ಅಲ್ಲು ಅರ್ಜುನ್ ಅವರ ವಿಚಾರಣೆ ನಡೆಸಲಾಗಿದೆ. ಡಿ.4ರಂದು ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಪ್ರಶ್ನೆ ಮಾಡಲಾಗಿದೆ.
ಏನೇನು ಪ್ರಶ್ನೆ ಕೇಳಲಾಗಿದೆ?
1. ಥಿಯೇಟರ್‌ಗೆ ಬರಬೇಡಿ ಎಂದು ಥಿಯೇಟರ್ ಮ್ಯಾನೇಜ್‌ಮೆಂಟ್ ಮೊದಲೇ ಹೇಳಿದ್ದಾರಾ?
2. ಥಿಯೇಟರ್‌ಗೆ ಬರಲು ಪೊಲೀಸ್ ಅನುಮತಿ ಕೇಳಿದ್ದೀರಾ, ಅದರ ಪ್ರತಿ ಇದೆಯೇ?
3. ಥಿಯೇಟರ್‌ನಲ್ಲಿರುವ ಪರಿಸ್ಥಿತಿ ಬಗ್ಗೆ ನಿಮ್ಮ ತಂಡ ನಿಮಗೆ ಮಾಹಿತಿ ನೀಡಿತ್ತೇ?
4. ನಿಮ್ಮ ಆಗಮನದ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿತ್ತೆ, ಎಷ್ಟು ಜನ ಬೌನ್ಸರ್ ನೇಮಕ ಮಾಡಲಾಗಿತ್ತು?
5. ನಿಮ್ಮ ಆಗಮನಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದರು. ಇದರ ಮಾಹಿತಿ ನಿಮ್ಮಗಿತ್ತಾ?
6. ಕಾಲ್ತುಳಿತ ಸಂಭವಿಸಿದ್ದು ಗೊತ್ತಾದರೂ, ಥಿಯೇಟರ್‌ನಿಂದ ಯಾಕೆ ನೀವು ಹೊರಗೆ ಹೋಗಲಿಲ್ಲ?
ಅಂದಹಾಗೆ, ಡಿ.13ರಂದು ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ಬೇಲ್ ಸಿಕ್ಕ ಹಿನ್ನೆಲೆ ನಟ ರಿಲೀಸ್ ಆಗಿದ್ದರು.
ಈಗಾಗಲೇ ಮೃತ ರೇವತಿ ಕುಟುಂಬಕ್ಕೆ ಅಲ್ಲು ಅರ್ಜುನ್ 25 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ತಮ್ಮ ಇಡೀ ತಂಡ ನೋಡಿಕೊಳ್ಳಲಿದೆ ಎಂದು ತಿಳಿಸಿದ್ದರು.