ಮಂಡ್ಯ: ಜಿಲ್ಲೆಯಲ್ಲಿ ಹಿರಿಯ ನಟ ಅಂಬರೀಶ್ ಅವರ ದರ್ಶನ ಮಾಡಿ ಬಂದು ಅಭಿಮಾನಿಯೊಬ್ಬ ನೇಣಿಗೆ ಶರಣಾಗಿದ್ದಾರೆ.
ಸುರೇಂದ್ರ ಜಿ.ಎಸ್(46) ನೇಣಿಗೆ ಶರಣಾದ ಅಂಬಿ ಅಭಿಮಾನಿ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಮೃತ ಸುರೇಂದ್ರ ಮದ್ದೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈಗ ಅದೇ ಬಾಡಿಗೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಭಾನುವಾರ ರಾತ್ರಿ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿಗೆ ಹೋಗಿ ಸುರೇಂದ್ರ ಅಂತಿಮ ದರ್ಶನ ಪಡೆದಿದ್ದರು. ಅಂಬರೀಶ್ ನಿಧನದಿಂದ ತೀವ್ರ ನೊಂದಿದ್ದು, ಈ ಬಗ್ಗೆ ಮನೆಯವರ ಬಳಿಯೂ ಅಂಬರೀಶ್ ಸಾವಿನಿಂದ ತುಂಬಾ ನೋವಾಗಿದೆ ಅಂತ ತಮ್ಮ ಅಳಲನ್ನು ವ್ಯಕ್ತಪಡಿಸಿದ್ದರು ಎಂದು ಕುಟುಂಬದವರು ಹೇಳಿದ್ದಾರೆ.
ನಟ ಅಂಬರೀಶ್ ಮೇಲಿನ ಅಭಿಮಾನದಿಂದ ಹಲವು ವರ್ಷಗಳ ಹಿಂದೆಯೇ ತನ್ನ ಕೈ ಮೇಲೆ ಅಂಬಿ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದರು. ಕೊನೆಗೆ ಅಂಬರೀಶ್ ಅಗಲಿಕೆಯನ್ನು ಸಹಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv