ಬೆಂಗಳೂರು: ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಸಿದು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಮನೆಗೆ ಕರೆಕೊಂಡು ಹೋಗಲಾಗಿದೆ.
ಇಂದು ಬೆಳಗ್ಗೆಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಕ್ರಿಕೆಟ್ ಕಪ್ (ಕೆಸಿಸಿ) ಆರಂಭಕ್ಕಾಗಿ ಸಿದ್ಧತೆ ನಡೆಸಲಾಗಿತ್ತು. ಇದಕ್ಕಾಗಿ ನಟ ಅಂಬರೀಶ್ ಸೇರಿದಂತೆ ಹಲವು ಸ್ಟಾರ್ ಗಳು, ನಿರ್ಮಾಪಕರು, ಕಲಾವಿದರು ಕ್ರೀಡಾಂಗಣದಲ್ಲಿ ನೆರೆದಿದ್ದರು. ನಟ ಅಂಬರೀಶ್ ಕೂಡ ಬೆಳಗ್ಗೆಯಿಂದ ಕ್ರೀಡಾಂಗಣದಲ್ಲೇ ಇದ್ದರು, ಆದರೆ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದರಿಂದ ಸುಸ್ತಾಗಿದ್ದ ಅವರು ಕುಸಿದು ಬಿದ್ದಿದ್ದಾರೆ. ಈ ವೇಳೆ ನಟ, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಅವರೊಂದಿಗೆ ಅಂಬರೀಶ್ ರನ್ನು ಆಸ್ಪತೆಗೆ ಕರೆದ್ಯೊಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅಂಬರೀಶ್ ಮನೆಗೆ ತೆರಳಿದ್ದಾರೆ.
Advertisement
Advertisement
ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ರಾಕ್‍ಲೈನ್ ವೆಂಕಟೇಶ್, ಅಂಬರೀಶ್ ಅವರು ಆರೋಗ್ಯವಾಗಿದ್ದಾರೆ. ಆದರೆ ಬೆಳಗ್ಗೆಯಿಂದ ಬಿಸಿಲಿನಲ್ಲಿ ಕುಳಿತ್ತಿದ್ದ ಕಾರಣ ಸ್ವಲ್ಪ ಆಯಾಸಗೊಂಡಿದ್ದರು. ಅದ್ದರಿಂದ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಬಿಡಲಾಯಿತು. ಅವರೇ ನಡೆದುಕೊಂಡು ನಮ್ಮ ಜೊತೆ ಬಂದರು. ಅದ್ದರಿಂದ ಅಭಿಮಾನಿಗಳು ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.
Advertisement
ಕ್ರೀಡಾಂಗಣದಲ್ಲಿ ನೆರೆದಿದ್ದ ಸ್ಟಾರ್ ಗಳ ಜೊತೆ ಬೆಳಗ್ಗೆಯಿಂದಲೂ ಅಂಬರೀಶ್ ಅವರು ಉತ್ಸಾಹದಿಂದಲೇ ಮಾತನಾಡುತ್ತಾ ಬೆಂಬಲ ವ್ಯಕ್ತಪಡಿಸುತ್ತಿದ್ದರು. ಕೊಡಗು ಸಂತ್ರಸ್ತರಿಗೆ ನೆರವಾಗಲು ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಸಿಸಿಯನ್ನು ಆರಂಭಿಸಲು ತಯಾರಿ ನಡೆಸಲಾಗಿದೆ. ಇದಕ್ಕಾಗಿ ನಟರು ಕೂಡ ನಿರಂತರ ಅಭ್ಯಾಸ ನಡೆಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv