CinemaKarnatakaLatestLeading NewsMain PostSandalwood

‘ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಿಸಿದ ನಟ ಅನಂತ್ ನಾಗ್

‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತಗೆದುಕೊಳ್ಳದೇ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳಿಗೆ ನಾನು ಮನಸೋತಿದ್ದೇನೆ. ಹಾಗಾಗಿ ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ’ ಎಂದು ನಟ ಅನಂತ್ ನಾಗ್ ಬಹಿರಂಗವಾಗಿ ಘೋಷಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ವಿಷಯವಾಗಿ ಮಾತನಾಡಿದ ಅನಂತ್ ನಾಗ್, ‘ರಾಷ್ಟ್ರದ ನಿರ್ಮಾಣ ದಲ್ಲಿ ಮಾಧ್ಯಮಗಳ ಪಾತ್ರ ಅನ್ನೋ ವಿಚಾರದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟಾಗ ನಾನು ಯೋಚಿಸಿದೆ. ಇದ್ಯಾವುದು ಮೋದಿ ತಂದಿರುವ ಹೊಸ ಕಾರ್ಯಕ್ರಮವಾ ಅಂತಾ ಯೋಚನೆಗೆ ಬಿದ್ದೆ. ಪತ್ರಿಕೆಗಳು ಹೀಗೆ ನಡೆಯಬೇಕು ಅಂತಾ ಸರ್ಕಾರಗಳು ತೀರ್ಮಾನ ಮಾಡಬೇಕಾ..? ಹೊಸ ಹೊಸ ಪೀಳಿಗೆಯ ಮಾಧ್ಯಮಗಳು ಹೇಗಿರಬೇಕು ಅಂತಾ ಅವರೇ ಚಿಂತಿಸಬೇಕು’ ಎಂದು ಅವರು ಪ್ರಧಾನ ಭಾಷಣದಲ್ಲಿ ಮಾತನಾಡಿದರು. ಇದನ್ನೂ ಓದಿ: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ `ಕಾಂತಾರ’ ನಟಿ ಸಪ್ತಮಿ ಭೇಟಿ

 

ಬಿಜೆಪಿ ಪರವಾಗಿ ಈಗಾಗಲೇ ಅನಂತ್ ನಾಗ್ (Anant Nag)  ಸಾಕಷ್ಟು ಮಾತುಗಳನ್ನು ಆಡಿದ್ದಾರೆ. ಸಂಘ ಪರಿವಾರದ  ಅನೇಕ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗಿದ್ದಾರೆ. ಮೋದಿ ಸಾಧನೆಯನ್ನು ಹಲವು ಬಾರಿ ಕೊಂಡಾಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಾವು ಮೋದಿ ಭಕ್ತ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಹಿರಿಯ ನಟ  ಅನಂತ್ ನಾಗ್ ಆಡಿದ ಮಾತು ಯಾವ ರೀತಿಗೆ ಚರ್ಚೆಗೆ ಕಾರಣವಾಗತ್ತೋ ಕಾದು ನೋಡಬೇಕು.

Live Tv

Leave a Reply

Your email address will not be published. Required fields are marked *

Back to top button