ಮಂಡ್ಯ: ಮಗನ ಹೆಸರಿಗೆ ಆಸ್ತಿಯನ್ನು ವರ್ಗಾಯಿಸಿದ್ದು ಈ ಮೂಲಕ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ತಾನು ಹೆಚ್ಚು ದಿನ ಬದುಕಲ್ಲ ಅನ್ನೋ ಸುಳಿವು ಮೊದಲೇ ಸಿಕ್ಕಿತ್ತಾ ಅನ್ನೋ ಪ್ರಶ್ನೆಯೊಂದು ಇದೀಗ ಕಾಡುತ್ತಿದೆ.
ಅಂಬಿ ನಾಲ್ಕು ತಿಂಗಳ ಹಿಂದೆಯಷ್ಟೇ ತಮ್ಮ ಆಸ್ತಿಯನ್ನು ಮಗನ ಹೆಸರಿಗೆ ಬದಲಾಯಿಸಿದ್ದರು. ಹುಟ್ಟೂರು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆ ಗ್ರಾಮದಲ್ಲಿ 7 ಎಕರೆಯಷ್ಟು ಪಿತ್ರಾರ್ಜಿತ ಆಸ್ತಿ ಇತ್ತು. ಮದ್ದೂರು ಪಟ್ಟಣದಲ್ಲಿರುವ ಸಬ್‍ರಿಜಿಸ್ಟ್ರಾರ್ ಕಚೇರಿಯಲ್ಲಿ ಪುತ್ರ ಅಭಿಷೇಕ್ ಜೊತೆಗೆ ಬಂದಿದ್ದ ಅಂಬಿರೀಶ್ ಅವರು ಈ ಆಸ್ತಿಯನ್ನು ಮಗನ ಹೆಸರಿಗೆ ಬದಲಾಯಿಸಿದ್ದರು.
Advertisement
Advertisement
ಜುಲೈ 26ರಂದು ಅಂಬಿ ಮದ್ದೂರಿನ ಸಬ್ ರಿಜಿಸ್ಟಾರ್ ಆಫೀಸಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಅವರು ಮಾಧ್ಯಮದವರನ್ನು ಒಳಗಡೆ ಬಿಡಬೇಡಿ ಅಂತ ಹೇಳಿ, ತಮ್ಮ ಮಗನ ಜೊತೆ ಕಚೇರಿಯಲ್ಲಿ ತನ್ನ ಆಸ್ತಿಯನ್ನು ಮಗನ ಹೆಸರಿಗೆ ಬರೆದುಕೊಟ್ಟಿದ್ದರು. ಕಚೇರಿಯಿಂದ ಹೊರಗಡೆ ಬಂದ ಬಳಿಕ ಅಂಬರೀಶ್ ಅವರು ಮಾಧ್ಯಮಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ. ಆದ್ರೆ ವಿಡಿಯೋ ಮಾಡಲು ಅವಕಾಶ ಮಾಡಿಕೊಟ್ಟಿದ್ದರು. ಇವೆಲ್ಲವನ್ನೂ ಗಮನಿಸಿದ್ರೆ ಅಂಬರೀಶ್ ಅವರಿಗೆ ತನ್ನ ಆರೋಗ್ಯ ಕ್ಷೀಣಿಸುತ್ತಿದೆ ಅಂತ ಅರಿವಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಮಗನ ಹೆಸರಿಗೆ ಆಸ್ತಿ ವರ್ಗಾವಣೆ ಮಾಡಿದ್ರಾ ಅಂತ ಮಂಡ್ಯದಲ್ಲಿ ಅವರ ಅಭಿಮಾನಿಗಳು ಚರ್ಚೆ ಮಾಡುವ ಮೂಲಕ ಭಾವುಕರಾಗುತ್ತಿದ್ದಾರೆ.
Advertisement
Advertisement
ನವೆಂಬರ್ 24ರ ಶನಿವಾರದಂದು ಮಂಡ್ಯದಲ್ಲಿ ಭೀಕರ ಬಸ್ ಅಪಘಾತ ನಡೆದಿತ್ತು. ಈ ಕುರಿತಾಗಿ ಅಂಬರೀಶ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅವರು ತನಗೆ ಹುಷಾರಿಲ್ಲದಿರುವುದಾಗಿ ತಿಳಿಸಿದ್ದರು. ಆದ್ರೆ ರಾತ್ರಿ ಹೃದಯಘಾತವಾಗಿತ್ತು. ಕೂಡಲೇ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ನಂತ ಅವರ ಪಾರ್ಥಿವ ಶರೀರವನ್ನು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.
ಭಾನುವಾರ ಸಂಜೆ ಅವರ ಪಾರ್ಥಿವ ಶರೀರವನ್ನು ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಕೊಂಡೊಯ್ದು, ಅಲ್ಲಿನ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸೋಮವಾರ ಮತ್ತೆ ಬೆಂಗಳೂರಿಗೆ ಪಾರ್ಥಿವ ಶರೀರವನ್ನು ತಂದು ಮೆರವಣಿಗೆಯ ಮೂಲಕ ಕಂಠೀರವ ಸ್ಟುಡಿಯೋಗೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv