ಬೆಂಗಳೂರು: ಕಿರುತೆರೆಯಲ್ಲಿ ಮಿಂಚುತ್ತಿರುವ ನಟ ಅನಿರುದ್ಧ, ಮಕ್ಕಳ ಜೊತೆಗೆ ತೀರ್ಥಯಾತ್ರೆಯ ಮಾಡಿಕೊಂಡು ಬಂದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ನಾವು ವೈಷ್ಣೋದೇವಿಗೆ ಹೋಗಿ ಬಂದೆವು. ಕೀರ್ತಿಯವರು ಕೆಲವು ವರ್ಷಗಳ ಹಿಂದೆ ಹೋಗಿ ಬಂದಿದ್ದಾರೆ. ಈ ಬಾರಿ ನಮ್ಮ ಜೊತೆ ಬಂದಿಲ್ಲ. ಸರ್ವೇ ಜನಃ ಸುಖಿನೋ ಭವಂತು. ತಾಯಿಯ ಅನುಗ್ರಹ ನಮ್ಮೆಲ್ಲರ ಮೇಲೂ ಇರಲಿ ಎಂದು ಅನಿರುದ್ಧ ಬರೆದುಕೊಂಡು ತೀರ್ಥಯಾತ್ರಗೆ ಹೋಗಿ ಬಂದಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ನನಗೆ ಅಕ್ರಮ ಸಂಬಂಧ ಇಲ್ಲ- ಟ್ರೋಲಿಗರ ವಿರುದ್ಧ ಕುಟುಕಿದ ಸಮಂತಾ
View this post on Instagram
ನಟ ಅನಿರುದ್ಧ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಶೂಟಿಂಗ್‍ನಲ್ಲಿ ಎಷ್ಟೇ ಬ್ಯುಸಿ ಇದ್ದರೂ ಕೂಡ ಅವರು ಪತ್ನಿ ಮತ್ತು ಮಕ್ಕಳಿಗಾಗಿ ಸಮಯ ಮೀಸಲಿಡುತ್ತಾರೆ. ಇತ್ತೀಚೆಗೆ ಮಕ್ಕಳ ಜೊತೆ ಅನಿರುದ್ಧ ತೀರ್ಥಯಾತ್ರೆ ಮಾಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇವಸ್ಥಾನ ಇದೆ. ಶೂಟಿಂಗ್ ನಡುವೆ ಬ್ರೇಕ್ ಪಡೆದುಕೊಂಡ ಅನಿರುದ್ಧ ಅವರು ಮಕ್ಕಳ ಜೊತೆ ಪ್ರಯಾಣ ಬೆಳೆಸಿದ್ದರು. ದೇವರ ಆಶೀರ್ವಾದ ಪಡೆದು ಮರಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರಣದಿಂದಲೂ ಅನಿರುದ್ಧ ಅವರು ಆಗಾಗ ಗಮನ ಸೆಳೆಯುತ್ತಾರೆ. ಬೆಂಗಳೂರು ಸೇರಿದಂತೆ ಅನೇಕ ಊರುಗಳ ಸ್ವಚ್ಚತೆಗಾಗಿ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಮಾಡುತ್ತಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸೀರಿಯಲ್‍ನಲ್ಲಿ ಅನಿರುದ್ಧ ಮಿಂಚುತ್ತಿದ್ದಾರೆ. ಅವರ ಅಭಿಮಾನಿಗಳ ಬಳಗವು ಅಪಾರ ಪ್ರಾಮಾಣದಲ್ಲಿ ಬೆಳೆದಿದೆ.