ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ ‘chef ಚಿದಂಬರ’ (Chef Chidambara) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಕೂಡ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ ಚೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಅನಿರುದ್ದ್ (Anirudh) ಅವರಿಗೆ ಹೆಸರಾಂತ ಬಾಣಸಿಗರು ತರಬೇತಿ ನೀಡುತ್ತಿದ್ದು, ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಎಂ.ಆನಂದರಾಜ್ (Anand Raj) ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ (Rachel David) ಹಾಗೂ ನಿಧಿ ಸುಬ್ಬಯ್ಯ (Nidhi Subbaiah) ಈ ಚಿತ್ರದ ನಾಯಕಿಯರು.
ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ಅವರು ಐದು ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಉದಯ್ ಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್ ನವೀನ್ ಕುಮಾರ್ ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ವಿವರಣೆ ನೀಡಿದರು.
Web Stories