ಬಹುಭಾಷಾ ನಟ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ (Aishwarya Sarja) ಮತ್ತು ತಮಿಳು ನಟ ಉಮಾಪತಿ ರಾಮಯ್ಯ ಮದುವೆಯ ಸುಂದರ ಫೋಟೋಗಳು.
Advertisement
ಚೆನ್ನೈನ ಅಂಜನಸುತ ಶ್ರೀ ಯೋಗಾಂಜನೇಯ ದೇವಸ್ಥಾನದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಐಶ್ವರ್ಯಾ ಸರ್ಜಾ ಮದುವೆ ನಡೆಯಿತು. ಇದನ್ನೂ ಓದಿ:ತಮಿಳಿನಲ್ಲಿ ಬಿಗ್ ಚಾನ್ಸ್ ಗಿಟ್ಟಿಸಿಕೊಂಡ ಕನ್ನಡದ ಆಲಿಯಾ ಭಟ್
Advertisement
Advertisement
ಜೂನ್ 7ರಿಂದ ಅರಿಶಿನ ಶಾಸ್ತ್ರದೊಂದಿಗೆ ನಟಿಯ ಮದುವೆ ಕಾರ್ಯಕ್ರಮಗಳು ಆರಂಭವಾದವು. ಆ ನಂತರ ಸಂಗೀತ್ ಹಾಗೂ ವರಪೂಜಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.
Advertisement
ಐಶ್ವರ್ಯಾ ಮದುವೆಗೆ ಸಂಗೀತ್ ಸಮಾರಂಭಕ್ಕೆ ಹೆಸರಾಂತ ಕಲಾ ನಿರ್ದೇಶಕ ಮೋಹನ್ ಅವರು ಅದ್ಧೂರಿ ಸೆಟ್ ಹಾಕಿದ್ದರು. ಎರಡು ಕುಟುಂಬದ ಬಂಧು ಮಿತ್ರರು ಈ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಚಿತ್ರರಂಗದ ನಟ-ನಟಿಯರಿಗೆ ಜೂನ್ 14ರಂದು ಚೆನ್ನೈನ ಖಾಸಗಿ ಹೋಟೆಲ್ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
ಐಶ್ವರ್ಯಾ ಮತ್ತು ಉಮಾಪತಿ (Umapathy Ramaiah) ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕುಟುಂಬಸ್ಥರ ಒಪ್ಪಿಗೆ ಪಡೆದು ಈಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.