ಮುದ್ದು ಮನಸ್ಸೆ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ (Arun Ram Gowda), ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು.ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು. ಆನಂತರ ಸಿನಿಮಾ ರಂಗದಿಂದ ದೂರವಾದರು. ಒಳ್ಳೊಳ್ಳೆ ಚಿತ್ರಗಳನ್ನು ಮಾಡಿದ್ದವರು ಸಡನ್ನಾಗಿ ದೂರವಾಗಿದ್ದು ಯಾಕೆ ಎಂಬ ಪ್ರಶ್ನೆ ಮೂಡಿತ್ತು.
Advertisement
ಇದೀಗ ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬ. ಈ ದಿನದಂದು ತಮ್ಮ ಚಿತ್ರದ ಮೊದಲ ಗ್ಲಿಂಪ್ಸನ್ನು (First Glimpse) ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ
Advertisement
Advertisement
ಇದೊಂದು ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಸಿನಿಮಾ ಎಂದು ತಿಳಿಸಿರುವ ಅರುಣ್ ರಾಮ್ ಗೌಡ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ನುರಿತರವೇ ಇರುತ್ತಾರೆ ಎನ್ನುತ್ತಾರೆ ಅರು ಗೌಡ.
Advertisement
ಮುಂದುವರೆದು ಮಾತನಾಡಿರುವ ಅವರು, ‘ನನ್ನ ಹುಟ್ಟುಹಬ್ಬದ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇನೆ’ ಎಂದು ಹೇಳಿದ್ದಾರೆ.
Web Stories