ಏಕಾಏಕಿ ಮದುವೆ ಫೋಟೋ ಹಂಚಿಕೊಂಡು ಅಚ್ಚರಿ ಮೂಡಿಸಿದ್ದ ಖ್ಯಾತನಟ ಆಶಿಷ್ ವಿದ್ಯಾರ್ಥಿ, ಇದೀಗ ತಮ್ಮ ಪತ್ನಿಯ ಜೊತೆ ಬಾಲಿಗೆ (Bali) ಹಾರಿದ್ದಾರೆ. ಆಶಿಷ್ ಜೊತೆ ಇರುವಂತಹ ಫೋಟೋವನ್ನು ಅವರ ಪತ್ನಿ ರೂಪಾಲಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ದಂಪತಿ ಹನಿಮೂನ್ (Honeymoon) ಮೂಡ್ ನಲ್ಲಿ ಇದ್ದಾರೆ.
ಕನ್ನಡ ಮಾತ್ರವಲ್ಲದೇ ಬಹುಭಾಷೆಯಲ್ಲಿ ನಟಿಸಿರುವ ಆಶಿಷ್ ವಿದ್ಯಾರ್ಥಿ (Ashish Vidyarthi) ಅವರು ತಮ್ಮ 60ನೇ ವಯಸ್ಸಿಗೆ 2ನೇ ಮದುವೆಯಾಗಿರೋದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿತ್ತು. ಫ್ಯಾಷನ್ ಇಂಡಸ್ಟ್ರಿಯ ಉದ್ಯಮಿ ರೂಪಾಲಿ (Roopali) ಜೊತೆ ದಾಂಪತ್ಯ (Wedding) ಜೀವನಕ್ಕೆ ನಟ ಕಾಲಿಟ್ಟಿದ್ದರು. ಅದನ್ನು ಸೋಷಿಯಲ್ ಮೀಡಿಯಾ ಮೂಲಕವೂ ಖಚಿತ ಪಡಿಸಿದ್ದರು. ಇದನ್ನೂ ಓದಿ:ಅಮೆರಿಕಾದಲ್ಲಿ ಅವಳಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಿದ ಪ್ರೀತಿ ಜಿಂಟಾ
ಬಹುಭಾಷಾ ನಟ ಆಶಿಷ್ ವಿದ್ಯಾರ್ಥಿ ಅವರು ಈ ಹಿಂದೆ ರಾಜೋಶಿ ಎಂಬುವವರನ್ನು ಮದುವೆಯಾಗಿದ್ದರು. ಆದರೆ ಈಗ ಆ ದಾಂಪತ್ಯಕ್ಕೆ ಸಾಕಷ್ಟು ವರ್ಷಗಳ ಹಿಂದೆಯೇ ಬ್ರೇಕ್ ಬಿದ್ದಿದೆ. ಹೊಂದಾಣಿಕೆ ಆಗದೇ ಇರುವ ಕಾರಣಕ್ಕಾಗಿ ಇಬ್ಬರೂ ಡಿವೋರ್ಸ್ ಬಯಸಿದ್ದರು. ನಂತರ ದೂರ ದೂರವಾದರು.
ಉದ್ಯಮಿ ರೂಪಾಲಿ ಅವರನ್ನ ನಟ ಆಶಿಷ್ 2ನೇ ಮದುವೆಯಾಗಿದ್ದಾರೆ. ಕೊಲ್ಕತ್ತಾದ ಕ್ಲಬ್‌ನಲ್ಲಿ ಮೇ25 ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆಪ್ತರು, ಗುರುಹಿರಿಯರ ಸಮ್ಮುಖದಲ್ಲಿ ಸರಳವಾಗಿ ನಟ ಆಶಿಷ್ ಮದುವೆಯಾಗಿದ್ದರು. ನಮ್ಮ ಮದುವೆ ಸಿಂಪಲ್ ಆಗಿ ನಡೆಯಬೇಕೆಂದು ಆಸೆ ಇತ್ತು ಅದೇ ರೀತಿ ಆಯಿತು. ಖುಷಿಯಿದೆ. ಸದ್ಯದಲ್ಲೇ ನಮ್ಮಿಬ್ಬರ ಭೇಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದು ಆಶಿಷ್ ಮಾತನಾಡಿದ್ದರು.
Web Stories