ಬೆಂಗಳೂರು: ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದೀಗ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದಾಗಿ ಬುಲೆಟ್ ಪ್ರಕಾಶ್ ಶನಿವಾರ ಕನ್ನಿಂಗ್‍ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು.
Advertisement
Advertisement
ಇದುವರೆಗೆ ಮೂರು ಆಸ್ಪತ್ರೆಯನ್ನು ಬದಲಿಸಿರುವ ಬುಲೆಟ್ ಪ್ರಕಾಶ್ ಶನಿವಾರ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಇದೀಗ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಲಿವರ್ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಕಾಶ್, ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಡ್ನಿ ವೈಫಲ್ಯದ ಜೊತೆಗೆ ಕಾಲಿಗೆ ಗ್ಯಾಂಗ್ರಿನ್ ಕೂಡ ಆಗಿದೆ. ಹೀಗಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ವೆಂಟಿಲೇಟರ್‍ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಕೃತಕ ಉಸಿರಾಟ ಸಾಧನದಿಂದ ಉಸಿರಾಡುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ. ಎರಡು ವರ್ಷಗಳ ಹಿಂದೆ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಶಸ್ತ್ರ ಚಿಕಿತ್ಸೆಯ ನಂತರ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಹೀಗಾಗಿ ಶಸ್ತ್ರ ಚಿಕಿತ್ಸೆಯೇ ಅವರ ಜೀವಕ್ಕೆ ಮುಳ್ಳಾಯಿತಾ ಎಂಬ ಪ್ರಶ್ನೆ ಎದ್ದಿತ್ತು. ಅಲ್ಲದೆ ಶಸ್ತ್ರ ಚಿಕಿತ್ಸೆಯ ನಂತರ ಸಿನಿಮಾಗಳಲ್ಲಿ ಅವಕಾಶ ಕಡಿಮೆಯಾಗಿತ್ತು. ಹೀಗಾಗಿ ಹಾಸ್ಯನಟ ಮಾನಸಿಕವಾಗಿ ಬಹಳ ನೊಂದಿದ್ದ ವಿಚಾರ ಆಪ್ತ ಮೂಲಗಳಿಂದ ತಿಳಿದು ಬಂದಿತ್ತು.