Bengaluru CityCinemaDistrictsKarnatakaLatestLeading NewsMain Post

ನಟಿ ಚೇತನಾ ರಾಜ್ ಸಾವು ಪ್ರಕರಣ – ಆಸ್ಪತ್ರೆ ವಿರುದ್ಧ ನೋಟಿಸ್ ಜಾರಿ

Advertisements

ಬೆಂಗಳೂರು: ಫ್ಯಾಟ್ ಸರ್ಜರಿಗೆ ಒಳಗಾಗಿ ಪ್ರಾಣ ಬಿಟ್ಟ ಕಿರುತೆರೆ ನಟಿ ಚೇತನಾ ರಾಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಸ್ಪತ್ರೆ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ.

ಚೇತನಾ ಅವರ ಸಾವಿನ ಕುರಿತು ಇಂದು ಹೆಚ್ಚಿನ ವಿವರಣೆಗಾಗಿ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ಆರೋಗ್ಯಾಧಿಕಾರಿಗಳ ತಂಡ ಭೇಟಿ ಕೊಟ್ಟಿದೆ. ಈ ವೇಳೆ ಆಸ್ಪತ್ರೆಯ ಬಾಗಿಲು ಹಾಕಲಾಗಿತ್ತು. ಹೀಗಾಗಿ ಖುದ್ದು ಆರೋಗ್ಯಾಧಿಕಾರಿಗಳ ಕಚೇರಿಗೆ ಬಂದು ಪ್ರಕರಣದ ವಿವರಣೆ ನೀಡುವಂತೆ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಬಸವೇಶ್ವರ ಮೂರ್ತಿಗೆ ಮುಸ್ಲಿಂರಿಂದ ಸ್ವಾಗತ

ನೋಟಿಸ್‍ನಲ್ಲಿ ಏನಿದೆ?
ಚೇತನಾ ರಾಜ್ ಮರಣದ ಕುರಿತು ತನಿಖೆ ಮಾಡಲು ಮಂಗಳವಾರ ಮಧ್ಯಾಹ್ನ 2 ಗಂಟಗೆ ಆರೋಗ್ಯಾಧಿಕಾರಿಗಳ ತಂಡವು ಡಾ. ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಗೆ ಭೇಟಿ ನೀಡಿತ್ತು. ಈ ವೇಳೆ ನಿಮ್ಮ ಸಂಸ್ಥೆಯು ಮುಚ್ಚಲಾಗಿತ್ತು. ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿ ನಮ್ಮ ಮೇಲಾಧಿಕಾರಿಗಳಿಗೆ ವರದಿ ನೀಡಲು ಸಾಧ್ಯವಾಗಿರುವುದಿಲ್ಲ. ಆದುದರಿಂದ ಮೇಲಾಧಿಕಾರಿಗಳ ಆದೇಶದ ಮೇರೆಗೆ ಈ ನೋಟಿಸ್ ಜಾರಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಗಳೊಂದಿಗೆ ವಿವರಣೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿಯಾಗುವಂತೆ ನೋಟಿಸ್‍ನಲ್ಲಿ ಸೂಚಿಸಿದೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

ಚೇತನಾ ಸಾವು:
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಬೆಸಿಟಿ ಸರ್ಜರಿ ವೇಳೆ ತೀವ್ರ ಅಸ್ವಸ್ಥರಾದ ಸೀರಿಯಲ್ ನಟಿ, 21 ವರ್ಷದ ಚೇತನಾರಾಜ್ ಮೃತಪಟ್ಟಿದ್ದಾರೆ. ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರು ಸೇರಿಕೊಂಡ ಪರಿಣಾಮ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಸುಬ್ರಹ್ಮಣ್ಯ ನಗರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಮೂವರು ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚೇತನಾರಾಜ್ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಅಬ್ಬಿಗೆರೆಯ ತೋಟದಲ್ಲಿ ಅಂತ್ಯಕ್ರಿಯೆ ನಡೀತು. ಗೀತಾ, ದೊರೆಸಾನಿ ಧಾರವಾಹಿಯಲ್ಲಿ ಚೇತನಾರಾಜ್ ನಟಿಸಿದ್ರು. ಒಲವಿನ ನಿಲ್ದಾಣ ಎಂಬ ಸೀರಿಯಲ್‍ನಲ್ಲಿ ಮುಖ್ಯಪಾತ್ರಕ್ಕೆ ಆಯ್ಕೆಯಾಗಿದ್ರು.

Leave a Reply

Your email address will not be published.

Back to top button