ಕೇರಳದ ವಯನಾಡಿನಲ್ಲಿ ಸಂಭವಿಸಿದ (Wayanad Landslide) ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮತ್ತು ರಾಮ್ ಚರಣ್ (Ram Charan) ಮುಂದಾಗಿದ್ದಾರೆ.
ವಯನಾಡು ಭೂಕುಸಿತ ನಿಮಿತ್ತ ಸಂಕಷ್ಟದಲ್ಲಿರುವವರಿಗೆ ಚಿರಂಜೀವಿ ಮತ್ತು ರಾಮ್ ಚರಣ್ ಕೇರಳದ ಸಿಎಂ ಫಂಡ್‌ಗೆ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ:ಜಾನ್ವಿ ಕಪೂರ್‌ಗೆ ಮತ್ತೆ ಸೋಲು- ಬಾಕ್ಸಾಫೀಸ್‌ನಲ್ಲಿ ‘ಉಲಾಜ್’ ಕಳಪೆ ಕಲೆಕ್ಷನ್
- Advertisement
- Advertisement
ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಪ್ರಕೃತಿಯ ವಿಕೋಪಕ್ಕೆ ನೂರಾರು ಜನರು ಪ್ರಾಣ ಕಳೆದುಕೊಂಡಿದಕ್ಕೆ ತೀವ್ರ ನೋವಾಗಿದೆ. ವಯನಾಡು ದುರಂತದ ಸಂತ್ರಸ್ತರಿಗಾಗಿ ನನ್ನ ಮನ ಮಿಡಿಯುತ್ತಿದೆ. ಚರಣ್ ಮತ್ತು ನಾನು ಕೇರಳದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡುವ ಮೂಲಕ ಸಂಕಷ್ಟದಲ್ಲಿರುವವರ ಬೆಂಬಲಕ್ಕೆ ನಿಲ್ಲುತ್ತೇವೆ. ಅವರೆಲ್ಲರಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೆಗಾಸ್ಟಾರ್ ಚಿರಂಜೀವಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಚಿರಂಜೀವಿ, ರಾಮ್ ಚರಣ್ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಅಂದಹಾಗೆ, ವಯನಾಡು ಭೂಕುಸಿತ ದುರಂತ ಹಿನ್ನೆಲೆ ಈಗಾಗಲೇ ರಶ್ಮಿಕಾ ಮಂದಣ್ಣ (Rashmika Mandanna), ಸೂರ್ಯ ದಂಪತಿ, ಮಮ್ಮುಟ್ಟಿ, ಚಿಯಾನ್ ವಿಕ್ರಮ್, ದುಲ್ಕರ್ ಸಲ್ಮಾನ್, ಅಲ್ಲು ಅರ್ಜುನ್ ಸೇರಿದಂತೆ ಅನೇಕರು ಕೇರಳದ ಸಿಎಂ ಫಂಡ್‌ಗೆ ಲಕ್ಷ ಲಕ್ಷ ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ.