ಬೆಂಗಳೂರು: ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಆಂಧ್ರಪ್ರದೇಶ ಖ್ಯಾತ ನಟ ಹಾಗು ರಾಜ್ಯಸಭಾ ಸದಸ್ಯ ಚಿರಂಜೀವಿ ಅವರನ್ನ ರಾಜ್ಯಕ್ಕೆ ಕರೆತರಲು ಚಿಂತನೆ ನಡೆಸಲಾಗಿದೆ ಎಂಬುದಾಗಿ ಕೆಪಿಸಿಸಿ ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕದ ಕೆಲ ಭಾಗಗಳಲ್ಲಿ ಮಾಸ್ ಅಭಿಮಾನಿಗಳು ಇರೋ ಕಡೆ ಇವರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಹೈದರಾಬಾದ್ ಕರ್ನಾಟಕ ಮತ್ತು ಬೆಂಗಳೂರು ಹಾಗು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಕ್ಷೇತ್ರಗಳ ಪ್ರಚಾರದಲ್ಲಿ ಉಪಯೋಗಿಸಿಕೊಳ್ಳಲು ನಿರ್ಧರಿಸಲಾಗಿದೆ. ಹೀಗಾಗಿ ನಟ ಚಿರಂಜೀವಿಯನ್ನು ರಾಜ್ಯಕ್ಕೆ ಕರೆತರುವ ಜವಾಬ್ದಾರಿ ಅಂಬರೀಶ್ ಗೆ ಸಿಎಂ ಮತ್ತು ಪರಮೇಶ್ವರ್ ನೀಡಿದ್ದಾರೆ ಎನ್ನಲಾಗಿದೆ.
- Advertisement
ಚಿರಂಜೀವಿ ಅತ್ಯಾಪ್ತ ಸ್ನೇಹಿತ ಅಂಬರೀಶ್ ಅವರು ಚಿರಂಜೀವಿಯ ಹಲವು ರಾಜಕೀಯ ನಿರ್ಧಾರಗಳ ಹಿಂದಿದ್ದಾರೆ. 2013 ರಲ್ಲಿ ಚಿರಂಜೀವಿ ಅವರು ಬೆಂಗಳೂರಿನಲ್ಲಿ ಪ್ರಚಾರ ಮಾಡಿದ್ದರು. ಇದೀಗ ಜೆಡಿಎಸ್ ನಾಯಕರು ಪವನ್ ಕಲ್ಯಾಣ್ ಹಿಂದೆ ಬಿದ್ದಿರುವುದರಿಂದ ಕಾಂಗ್ರೆಸ್ ನಾಯಕರು ಚಿರಂಜೀವಿ ಕರೆತರಲು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
- Advertisement
- Advertisement
ಜಿಲ್ಲೆಯ ವಿಧಾನಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ಇಂದು ಹೊಸ ಸಂಚಲನ ಮೂಡಲಿದೆ. ಇದಕ್ಕೆ ಕಾರಣ ತೆಲುಗು ನಟ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವರ್ ಸ್ಟಾರ್ ಪವನ್ ಕಲ್ಯಾಣ್ ಜಿಲ್ಲೆಗೆ ಆಗಮಿಸಿತ್ತಿರುವುದು.
ಪವನ್ ಕಲ್ಯಾಣ್ ರಾಜ್ಯಕ್ಕೆ ಭೇಟಿ: ಆಂಧ್ರ ಪ್ರದೇಶದ ಹಿಂದೂಪುರಂ ನಲ್ಲಿ ಜನಸೇನಾ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿರುವ ನಟ ಪವನ್ ಕಲ್ಯಾಣ್ ನಿನ್ನೆ ಸಂಜೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದರು. ನಗರ ಹೊರವಲಯದ ಕೆವಿ ಕ್ಯಾಂಪಸ್ ಗೆ ಆಗಮಿಸಿದ ನಟ ಪವನ್‍ಕಲ್ಯಾಣ್ ಅವರಿಗೆ ಅಭಿಮಾನಿಗಳು ಹೂ ಮಳೆಯನ್ನು ಸುರಿಸಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೆ ವಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಕೆ ವಿ ನವೀನ್ ಕಿರಣ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದು, ಹೀಗಾಗಿ ನವೀನ್ ಜೊತೆ ಪವನ್ ಕಲ್ಯಾಣ್ ಮಾತುಕತೆ ನಡೆಸಿದ್ದಾರೆ.
ನಟ ಪವನ್ ರಾಜ್ಯಕ್ಕೆ ಆಗಮಿಸಿದ್ದರಿಂದ ರಾಜ್ಯ ತೆಲುಗು ಪ್ರಭಾವ ಹೊಂದಿರುವ ಕ್ಷೇತ್ರಗಳಲ್ಲಿ ಜನಸೇನಾ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸುತ್ತಾರೆ ಎನ್ನಲಾಗಿದೆ. ಪ್ರಮುಖವಾಗಿ ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಿನ ಪಾವಗಡ, ರಾಯಚೂರು, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಷೇತ್ರಗಳ್ಲಿ ಪವನ್ ಪಾಲಿಟಿಕ್ಸ್ ಆರಂಭವಾಲಿದೆ ಎನ್ನಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಜನಸೇನಾ ಅಭ್ಯರ್ಥಿಗಳನ್ನು ನಿಲ್ಲಿಸಲು ಚಿಂತನೆ ನಡೆಸಲಾಗುತ್ತದೆ ಎನ್ನಲಾಗಿದ್ದು ಪವನ್ ಕಲ್ಯಾಣ್ ನಡೆಯಿಂದ ರಾಷ್ಟ್ರೀಯ ಪಕ್ಷಗಳಲ್ಲಿ ತಳಮಳ ಶುರುವಾಗಿದೆ.