‘ತಂಗಲಾನ್’ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯ- ಶೂಟಿಂಗ್ ಸ್ಥಗಿತ

Public TV
1 Min Read
vikram actor

ಕ್ಷಿಣ ಭಾರತದ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyaan Vikram) ಅವರು ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan 2) ಸಿನಿಮಾ ಪ್ರಚಾರ ಮುಗಿಸಿ ಮತ್ತೆ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ‘ತಂಗಲಾನ್’ (Thangalaan Film) ರಿಹರ್ಸಲ್ ವೇಳೆ ಬಿದ್ದು ವಿಕ್ರಮ್ ಪಕ್ಕೆಲುಬಿಗೆ ಪೆಟ್ಟಾಗಿದೆ. ಕೂಡಲೇ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

VIKRAM

‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯಗಳಾಗಿರೋದ್ರಿಂದ ಶೂಟಿಂಗ್ ನಿಲ್ಲಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕೆ ಮತ್ತೆ ಶೂಟಿಂಗ್ ಶುರುವಾಗುತ್ತದೆ. ಈ ಹಿಂದೆ ಕೂಡ ಇದೇ ಸಿನಿಮಾ ಸೆಟ್‌ನಲ್ಲಿ ವಿಕ್ರಮ್‌ಗೆ ಪೆಟ್ಟಾಗಿ ಕೆಲವು ದಿನಗಳ ಕಾಲ ಶೂಟಿಂಗ್ ನಿಂತಿತ್ತು. ಇದರಿಂದ ವಿಕ್ರಮ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ವಿಕ್ರಮ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಕೋಲಾರ ಚಿನ್ನದ ಗಣಿಯ ಕಾರ್ಮಿಕರ ಸುತ್ತಾ ‘ತಂಗಲಾನ್’ ಸಿನಿಮಾ ಮೂಡಿ ಬರ್ತಿದೆ. ನಿರ್ದೇಶಕ ಪಾ.ರಂಜಿತ್ ಕೋಲಾರದಲ್ಲಿ ನಡೆದ ನಿಜವಾದ ಘಟನೆಗಳನ್ನು ಆಧರಿಸಿ, ಆ ಬಗ್ಗೆ ಸಂಶೋಧನೆ ನಡೆಸಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನೂರು ವರ್ಷಗಳ ಹಿಂದೆ ಅಲ್ಲಿನ ಗಣಿ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎನ್ನುವುದರ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.

Share This Article