ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjay) ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಉಪಮುಖ್ಯಮಂತಿ ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್‌ಗೆ (DK Suresh) ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ:ವಿದೇಶದಲ್ಲೂ UI ಹವಾ: ಉಪ್ಪಿ ಸಿನಿಮಾಗೆ ಪ್ರೇಕ್ಷಕರು ಫಿದಾ
Advertisement
ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ದಂಪತಿಗೆ ಮದುವೆ ಆಹ್ವಾನ ನೀಡಿದ್ದಾರೆ ಡಾಲಿ. ಕೆಲ ಕಾಲ ನಟ ಸಮಯ ಕಳೆದಿದ್ದಾರೆ. ಇದೇ ವೇಳೆ, ಡಿಕೆ ಸುರೇಶ್‌ರನ್ನು ಭೇಟಿಯಾಗಿ ಮದುವೆಗೆ ಆಮಂತ್ರಿಸಿದ್ದಾರೆ.
Advertisement
Advertisement
ಅಂದಹಾಗೆ, ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಮದುವೆಯಾಗುತ್ತಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಈ ಮದುವೆಯಲ್ಲಿ ಸ್ಯಾಂಡಲ್‌ವುಡ್ ಕಲಾವಿದರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.