ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸೆಟ್‌ಗೆ ತೆರಳಿ ಯಶ್‌ಗೆ (Yash) ಡಾಲಿ ಮದುವೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ರಾಕಿ ಭಾಯ್‌ಗೆ ಭೇಟಿಯಾಗಿ ಮದುವೆ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ‘ಮಹಾನಟಿ’ ವಿನ್ನರ್ ಎಂಟ್ರಿ- ‘ಕಾಟೇರ’ ಡೈರೆಕ್ಟರ್ ತರುಣ್ ಸಿನಿಮಾದಲ್ಲಿ ಪ್ರಿಯಾಂಕಾ
ನ್ಯಾಷನಲ್ ಸ್ಟಾರ್ ಯಶ್ ಅವರು ಈಗ ಬೆಂಗಳೂರಿನ HMT ಫ್ಯಾಕ್ಟರಿ ಆವರಣದಲ್ಲಿ ‘ಟಾಕ್ಸಿಕ್’ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸೆಟ್‌ಗೆ ನಟ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ತಮ್ಮ ವಿವಾಹದ ಆಹ್ವಾನ ಪತ್ರಿಕೆಯನ್ನು ಯಶ್‌ಗೆ ನೀಡಿದ್ದಾರೆ. ಆ ಸಂದರ್ಭದ ಫೋಟೋಸ್ ಇಲ್ಲಿವೆ. ಮದುವೆ ಸಲುವಾಗಿ ಧನಂಜಯ್ (Daali Dhananjay) ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಬ್ರೇಕ್ ಪಡೆದಿದ್ದಾರೆ.
ಮೈಸೂರಿನಲ್ಲಿ ಫೆಬ್ರವರಿ 15 ಮತ್ತು 16ರಂದು ಡಾಲಿ ಮದುವೆ ನೆರವೇರಲಿದೆ. ಡಾಲಿ ಮದುವೆ ಸಂಭ್ರಮದಲ್ಲಿ ರಾಜಕೀಯ ಗಣ್ಯರು ಸಿನಿಮಾ ಸ್ಟಾರ್ಸ್ ಭಾಗಿಯಾಗಲಿದ್ದಾರೆ.
ಇನ್ನೂ ಡಾಲಿ ಅವರು ಡಾಕ್ಟರ್ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಇಬ್ಬರ ಮದುವೆಗೆ ಗುರುಹಿರಿಯರ ಸಮ್ಮತಿಯಿದೆ.