ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ (CCH 64 Court) ಮುಂದೆ ಹಾಜರಾಗಲಿದ್ದಾರೆ.
ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ (Pavithra Gowda) ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಅಂತಾ ನ್ಯಾಯಾದೀಶರು ಕೇಳಲಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಅರೆಸ್ಟ್
ಇಲ್ಲ ಸ್ವಾಮಿ ಇದೆಲ್ಲಾ ಸುಳ್ಳು ವಿಚಾರಣೆ ನಡೆಯಲಿ ಅಂತಾ ಆರೋಪಿಗಳು ಹೇಳಿಕೆ ನೀಡುವ ಸಾಧ್ಯತೆ ಇದೆ. ಇದೇ ರೀತಿ ಎಲ್ಲಾ 17 ಆರೋಪಿಗಳನ್ನ ಕರೆದು ಅವರ ಮೇಲೆ ದಾಖಲಾಗಿರೊ ಸೆಕ್ಷನ್ ಬಗ್ಗೆ ನ್ಯಾಯಾಧೀಶರು ವಿವರಣೆ ಕೇಳಲಿದ್ದಾರೆ. ಈ ಪ್ರಕ್ರಿಯೆ ಮುಗಿದ ಮೇಲೆ ದೊಷಾರೋಪ ನಿಗದಿ ಬಳಿಕ ಮುಂದೊಂದು ದಿನ ಟ್ರಯಲ್‌ಗೆ ದಿನಾಂಕ ನ್ಯಾಯಾಧೀಶರು ನಿಗದಿಪಡಿಸಲಿದ್ದಾರೆ. ಇದೇ ವೇಳೆ ಹಾಸಿಗೆ ತಲೆದಿಂಬು ನೀಡುವ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ಛತ್ತೀಸ್‌ಗಢ ಮದ್ಯ ಹಗರಣ | ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ