ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಮತ್ತು ವಿಜಯಲಕ್ಷ್ಮಿ (Vijayalakshmi) ದಾಂಪತ್ಯಕ್ಕೆ (Wedding) ಇಂದಿಗೆ 22 ವರ್ಷಗಳಾಗಿವೆ. ಇದೇ ಖುಷಿಯಲ್ಲಿ ಪತಿಯೊಂದಿಗಿನ ಫೋಟೋವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
2003ರಲ್ಲಿ ಮೇ 19ರಂದು ಧರ್ಮಸ್ಥಳದಲ್ಲಿ ವಿಜಯಲಕ್ಷ್ಮಿಯೊಂದಿಗೆ ದರ್ಶನ್ ದಾಂಪತ್ಯ ಬದುಕಿಗೆ ಕಾಲಿಟ್ಟರು. ಸಾಕಷ್ಟು ಏಳು- ಬೀಳುಗಳನ್ನು ಕಂಡಿರುವ ಈ ಜೋಡಿ ಇದೀಗ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸದ್ಯ ಪತಿಯೊಂದಿಗೆ ಮುದ್ದಾಗಿ ಪೋಸ್ ನೀಡಿರುವ ಫೋಟೋ ಶೇರ್ ಮಾಡಿ, ‘ಶಾಶ್ವತವಾಗಿ’ ಎಂದು ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ. ಮದುವೆ ಆ್ಯನಿವರ್ಸರಿ ಖುಷಿಯಲ್ಲಿರುವ ಈ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ರೇಸ್ ವೇಳೆ ನಟ ಅಜಿತ್ ಕಾರ್ ಟಯರ್ ಸ್ಫೋಟ!
View this post on Instagram
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
‘ಡೆವಿಲ್’ ಸಿನಿಮಾದ ಚಿತ್ರೀಕರಣವು ಭರದಿಂದ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ‘ತಾರಕ್’ ಡೈರೆಕ್ಟರ್ ಮಿಲನಾ ಪ್ರಕಾಶ್ `ಡೆವಿಲ್’ಗೆ ನಿರ್ದೇಶನ ಮಾಡುತ್ತಿದ್ದಾರೆ.