ನಟ ದರ್ಶನ್ (Darshan) ಮತ್ತು ವಿಜಯಲಕ್ಷ್ಮಿ (Vijayalakshmi) ಮದುವೆಯಾಗಿ ಇಂದಿಗೆ (ಮೇ 19) 22 ವರ್ಷಗಳು ಕಳೆದಿವೆ. ಇದೇ ಖುಷಿಯಲ್ಲಿ ಪತ್ನಿ ಕೈಹಿಡಿದು ‘ಮುದ್ದು ರಾಕ್ಷಸಿ’ ಹಾಡಿಗೆ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ಮುದ್ದಾದ ಜೋಡಿಯ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ದರ್ಶನ್ ದಾಂಪತ್ಯಕ್ಕೆ 22 ವರ್ಷ- ಹೊಸ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ
ಮದುವೆ ಆ್ಯನಿವರ್ಸರಿ (Wedding Anniversary) ವಿಶೇಷವಾಗಿ ಆಚರಿಸಲು ಇಂಡೋನೇಷ್ಯಾದ ಬಾಲಿಗೆ ದರ್ಶನ್ ದಂಪತಿಗೆ ತೆರಳಿದ್ದಾರೆ. ಈ ಸಂಭ್ರಮಕ್ಕೆ ನಟ ಚಿಕ್ಕಣ್ಣ ಕೂಡ ಸಾಥ್ ನೀಡಿದ್ದಾರೆ. ಪತ್ನಿಗಾಗಿ ದರ್ಶನ್ ಹಿಂದಿ ಹಾಡೊಂದನ್ನು ಹಾಡಿದ್ದಾರೆ. ಅದಷ್ಟೇ ಅಲ್ಲ, ವಿಜಯಲಕ್ಷ್ಮಿ ಕೂಡ ಹಾಡು ಹಾಡುತ್ತಾ ಎಂಜಾಯ್ ಮಾಡಿದ್ದಾರೆ. ಇದನ್ನೂ ಓದಿ: ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
‘ವಾಮನ’ ಸಿನಿಮಾದ ‘ಮುದ್ದು ರಾಕ್ಷಸಿ’ ಚಿತ್ರದ ಹಾಡಿಗೆ ಪತ್ನಿ ಕೈಹಿಡಿದು ದರ್ಶನ್ ರೊಮ್ಯಾಂಟಿಕ್ ಹೆಜ್ಜೆ ಹಾಕಿದ್ದಾರೆ. ಇಬ್ಬರ ಖುಷಿ ನೋಡಿ ಡಿಬಾಸ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇವರಿಬ್ಬರ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಕಳೆದ ವರ್ಷ ಮದುವೆ ಆ್ಯನಿವರ್ಸರಿಯನ್ನು ದುಬೈಯಲ್ಲಿ ಅದ್ಧೂರಿಯಾಗಿ ದರ್ಶನ್ ದಂಪತಿ ಆಚರಿಸಿದ್ದರು. ಈ ವರ್ಷ ಬಾಲಿಯಲ್ಲಿ ಈ ಜೋಡಿ ಕಾಲ ಕಳೆಯುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ.
‘ಡೆವಿಲ್’ ಸಿನಿಮಾದ (Devil) ಚಿತ್ರೀಕರಣವು ಭರದಿಂದ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ‘ತಾರಕ್’ ಡೈರೆಕ್ಟರ್ ಮಿಲನಾ ಪ್ರಕಾಶ್ ‘ಡೆವಿಲ್’ಗೆ ನಿರ್ದೇಶನ ಮಾಡುತ್ತಿದ್ದಾರೆ.