ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಮೇಕಿಂಗ್ ವಿಡಿಯೋ ಔಟ್

Public TV
1 Min Read
darshan 4

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿಮಾನಿಗಳಿಗೆ ಸಿಹಿಸುದ್ದಿ. ಇತ್ತೀಚೆಗೆ ‘ಡೆವಿಲ್’ (Devil Film) ಸಿನಿಮಾದ ಫಸ್ಟ್ ಲುಕ್  ರಿಲೀಸ್ ಆಗಿತ್ತು. ಈಗ ಅದರ ತೆರೆಹಿಂದಿನ ಝಲಕ್ ಹೇಗಿತ್ತು ಎಂಬುದನ್ನು ಇದೀಗ ರಿವೀಲ್ ಮಾಡಿದ್ದಾರೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಮೇಕಿಂಗ್ ವಿಡಿಯೋವನ್ನು ಚಿತ್ರತಂಡ ರಿಲೀಸ್ ಮಾಡಿದೆ.

darshan 1 3

ಫೆಬ್ರವರಿಯಲ್ಲಿ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿತ್ತು. ನಮ್ಮ ಮನೆಯಲ್ಲೊಂದು ಪುಟ್ಟ ಪಾಪು ಇರುವುದು. ಫೋಟೋ ತೆಗೆದರೆ ಅದಕ್ಕೆ ಬಲು ಕೋಪ ಬರುವುದು. ಫೋಟೋ ತೆಗೆದ ಪಾಪು ಕೈಯ ಮುರಿದು ಬಿಡುವುದು. ಸರ್ಸು ಪಾಪು ಹೆಸರು ಕೇಳಲ್ವಾ? ಎಂದು ದರ್ಶನ್‌ ಹೇಳಿರುವ ಡೈಲಾಗ್ ‘ಡೆವಿಲ್’ ಮೊದಲ ಟೀಸರ್‌ನಲ್ಲಿತ್ತು. ಈಗ ಇದರ ವಿಡಿಯೋ ಬಿಡಲಾಗಿದೆ. ಕಲರ್‌ಫುಲ್‌ ಲೋಕೇಷನ್‌ನಲ್ಲಿ ದರ್ಶನ್ ಸಖತ್ ಸ್ಟೈಲೀಶ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಕ್ರಿಕೆಟ್ ಬಾಲ್‌ನಂತೆ ಕಾಣುವ ಡ್ರೆಸ್‌ನಲ್ಲಿ ಜಾನ್ವಿ ಕಪೂರ್ ಮಿಂಚಿಂಗ್

darshan 1 4‘ತಾರಕ್’ ನಂತರ ‘ಡೆವಿಲ್’ ಚಿತ್ರದ ಮೂಲಕ ಮತ್ತೆ ದರ್ಶನ್‌ಗೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಶುರುವಾಗಿದೆ. ಆದರೆ ಶೂಟಿಂಗ್ ವೇಳೆ, ದರ್ಶನ್ ಕೈಗೆ ಪೆಟ್ಟಾದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಈಗ ಗುಣಮುಖರಾಗಿರುವ ದರ್ಶನ್ ಸದ್ಯದಲ್ಲೇ ಡೆವಿಲ್ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.

ಅಂದಹಾಗೆ, ‘ಕಾಟೇರ’ (Kaatera)  ಚಿತ್ರದ ಸಕ್ಸಸ್ ನಂತರ 8ಕ್ಕೂ ಹೆಚ್ಚು ಸಿನಿಮಾಗಳಿಗೆ ದರ್ಶನ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.

Share This Article