ಬೆಂಗಳೂರು: ದರ್ಶನ್‌ಗೆ (Darshan) ರಾಜಾಥಿತ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡನ್ ನಾಗನನ್ನು (Wilson Garden Naga) ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಜೈಲಿಗೆ (Kalaburagi Jail) ಶಿಫ್ಟ್ ಮಾಡಲು ಕೋರ್ಟ್ ಆದೇಶ ಪ್ರಕಟಿಸಿದೆ.
ವಿಲ್ಸನ್ ಗಾರ್ಡನ್ ನಾಗ ಸೇರಿ ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ವರ್ಗವಾಗಿದ್ದಾರೆ. ಇದನ್ನೂ ಓದಿ: Asian Champions Trophy| ಅತಿಥೇಯ ಚೀನಾಗೆ ಸೋಲು – 5ನೇ ಬಾರಿ ಭಾರತ ಚಾಂಪಿಯನ್
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: Asian Champions Trophy| ಅತಿಥೇಯ ಚೀನಾಗೆ ಸೋಲು – 5ನೇ ಬಾರಿ ಭಾರತ ಚಾಂಪಿಯನ್
ಕಳೆದ ವರ್ಷ ಆಗಸ್ಟ್‌ನಲ್ಲಿ ಸಿದ್ದಪುರ ಮಹೇಶ್‌ನನ್ನ ನಾಗ ತಂಡ ಕೊಚ್ಚಿ ಕೊಲೆ ಮಾಡಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬಂದ ಕೇವಲ ಇನ್ನೂರು ಮೀಟರ್ ಅಂತರದಲ್ಲೇ ಸಿದ್ದಪುರ ಮಹೇಶನನ್ನು ಆರೋಪಿಗಳು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಬರೋಬ್ಬರಿ ಇಪ್ಪತ್ತು ಜನರನ್ನು ಬಂಧನ ಮಾಡಲಾಗಿದೆ. ತಮ್ಮ ವಿರೋಧಿ ತಂಡಕ್ಕೆ ಟಾಂಗ್ ನೀಡಲು ಜೈಲಿನ ಒಳಗಡೆ ನಾಗನ ತಂಡ ಕ್ಲಿಕ್ಕಿಸಿದ ಫೋಟೋ ವೈರಲ್ ಆಗಿತ್ತು.