ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್‌ಗೆ (Darshan) ಮತ್ತೊಂದು ಶಾಕ್ ಎದುರಾಗಿದೆ. ದರ್ಶನ್ ಗನ್ ಸೀಜ್ ಆಗಿದೆ.
ಕಮಿಷನರ್ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿತ್ತು. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೆ ದರ್ಶನ್‌ಗೆ ಆರ್.ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ಅಮಾನತು
ನೋಟಿಸ್ ಜಾರಿ ಮಾಡಿದ್ದರೂ ಗನ್ ಜಮೆ ಮಾಡಲು ದರ್ಶನ್ ಹಿಂದೇಟು ಹಾಕಿದ್ದರು. ಇಂದು ಖುದ್ದು ದರ್ಶನ್ ಮನೆಗೆ ತೆರಳಿ ಪೊಲೀಸರು ಗನ್ ಸೀಜ್ ಮಾಡಿದ್ದಾರೆ. ಚೆನ್ನಮ್ಮನಕೆರೆಯ ವಿಜಯಲಕ್ಷ್ಮಿ ಫ್ಲ್ಯಾಟ್‌ನಲ್ಲಿದ್ದ ದರ್ಶನ್ ಗನ್ ಸೀಜ್ ಆಗಿದೆ.
ದರ್ಶನ್ ಹೆಸರಿನಲ್ಲಿದ್ದ ಪಿಸ್ತೂಲ್ ಅನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಗನ್ ಸೀಜ್ ಬಗ್ಗೆ ‘ಪಬ್ಲಿಕ್ ಟಿವಿ’ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಈ ವಾರ ನಿರ್ಣಾಯಕ – ದರ್ಶನ್ ಸರ್ಜರಿ ಬಗ್ಗೆ ವೈದ್ಯರಿಂದ ಸ್ಫೋಟಕ ಮಾಹಿತಿ